alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ರಾಪ್ತೆ ಮೇಲೆ ಶಾಸಕನಿಂದ ನಿರಂತರ ಅತ್ಯಾಚಾರ…!

RJD-MLA_6

ಕಾಮಕ್ಕೆ ಕಣ್ಣಿಲ್ಲ ಅಂತಾರೆ. ಈ ಪ್ರಕರಣ ನೋಡಿದರೆ ಅದು ನಿಜ ಎನಿಸುವಂತಿದೆ. ಜನ ಪ್ರತಿನಿಧಿಯಾಗಿ ಜನರ ಹಿತಕಾಯಬೇಕಾದ ಶಾಸಕನೊಬ್ಬ, ತನ್ನ ಸ್ಥಾನದ ಘನತೆ, ಗೌರವ ಮರೆತು, ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ರಾಷ್ಟ್ರೀಯ ಜನತಾದಳ ಪಕ್ಷದ ಶಾಸಕ ಹಾಗೂ ಲಾಲೂ ಪ್ರಸಾದ್ ಯಾದವ್ ಅವರ ಪರಮಾಪ್ತ ರಾಜ್ ಬಲ್ಲಬ್ ಯಾದವ್ ಅವರು ಈ ಆರೋಪಕ್ಕೆ ಗುರಿಯಾದವರು. ನವಾಡ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಜ್ ಬಲ್ಲಬ್ ಯಾದವ್ ನಳಂದ ಜಿಲ್ಲೆಯ ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಿರಂತರವಾಗಿ ಅತ್ಯಾಚಾರ ಎಸಗಿದ್ದಲ್ಲದೇ,  ಯಾರಿಗೂ ವಿಷಯ ಹೇಳದಂತೆ ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಹೇಳಲಾಗಿದೆ.

ಅಪ್ರಾಪ್ತೆ ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಪೊಲೀಸರು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಅತ್ಯಾಚಾರ ನಡೆದಿರುವುದು ಸಾಬೀತಾಗಿದೆ. ಇದೀಗ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶಾಸಕ ರಾಜ್ ಬಲ್ಲಬ್ ಯಾದವ್ ಅವರನ್ನು ಬಂಧಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...