alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದಲ್ಲಿಯೂ ಗೆಲುವು: ಅಮಿತ್ ಶಾ ವಿಶ್ವಾಸ

ನವದೆಹಲಿ: ವಂಶಾಡಳಿತ, ಜಾತಿವಾದದ ವಿರುದ್ಧವಾಗಿ ಜನ ಮತಹಾಕಿದ್ದಾರೆ ಎಂದು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ರಾಜ್ಯಗಳ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ದೇಶದ ಜನ ಸಾಧನೆಗೆ, ಅಭಿವೃದ್ಧಿಗೆ ಬೆಂಬಲ ನೀಡಿದ್ದಾರೆ. ದೇಶ ತುಷ್ಠೀಕರಣ ನೀತಿಯಿಂದ ಮುಕ್ತವಾಗಲಿದೆ. ಕಾಂಗ್ರೆಸ್ ಪ್ರಮುಖ ನಾಯಕರು ಸೋಲು ಕಂಡಿದ್ದಾರೆ. ವಿಕಾಸವಾದಕ್ಕೆ ಬೆಂಬಲ ಸಿಕ್ಕಿದೆ ಎಂದು ತಿಳಿಸಿದ್ದಾರೆ.

ಈಗ ದೇಶದ 14 ರಾಜ್ಯಗಳಲ್ಲಿ ಬಿ.ಜೆ.ಪಿ. ಅಧಿಕಾರದಲ್ಲಿದೆ. 5 ರಾಜ್ಯಗಳಲ್ಲಿ ಮಿತ್ರ ಪಕ್ಷಗಳು ಅಧಿಕಾರದಲ್ಲಿವೆ. ಮುಂದೆ ಕರ್ನಾಟಕ ಸೇರಿದಂತೆ 4 ರಾಜ್ಯಗಳ ಚುನಾವಣೆ ನಡೆಯಲಿದ್ದು, ಬಿ.ಜೆ.ಪಿ. ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...