alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಸಂಸದರ ಹಠಾತ್ ನಿಧನ, ಮುಂದೂಡಿಕೆಯಾಗುತ್ತಾ ಕೇಂದ್ರ ಬಜೆಟ್ ಮಂಡನೆ?

ಮಹಾರಾಷ್ಟ್ರದ ಬಿಜೆಪಿ ಸಂಸದ ಚಿಂತಾಮಣ್ ವನಗ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಂಸದರಿಗೆ 67 ವರ್ಷ ವಯಸ್ಸಾಗಿತ್ತು. ಸಂಸದರ ನಿಧನದಿಂದ ಕೇಂದ್ರ ಬಜೆಟ್ ಮಂಡನೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಅಂತಾ ಹೇಳಲಾಗ್ತಿದೆ.

ಸಂಸತ್ತಿನಲ್ಲಿ ಅಗಲಿದ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ನಂತರ ಕಲಾಪ ಆರಂಭಿಸಲಾಗುತ್ತದೆ. ಕಳೆದ ವರ್ಷ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಗಳ ಭಾಷಣದ ವೇಳೆ IUML ಮುಖಂಡ ಇ ಅಹಮದ್ ಕುಸಿದು ಬಿದ್ದಿದ್ದರು. ಆದರೂ ಬಜೆಟ್ ಮಂಡಿಸಲಾಗಿತ್ತು.

ಚಿಂತಾಮಣ್ ವಾರಂಗ್ ಬಿಜೆಪಿ ಸಂಸದರಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. ದೆಹಲಿಯ ತಮ್ಮ ನಿವಾಸದಲ್ಲಿ ಚಿಂತಾಮಣ್ ಕುಸಿದು ಬಿದ್ದಿದ್ರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯ್ತು. ಅರ್ಧ ಗಂಟೆ ಬಳಿಕ ಸಂಸದರು ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ.

ಸಂಸದರ ಹುಟ್ಟೂರು ಮಹಾರಾಷ್ಟ್ರದ ಕವಾಡ್ ಗ್ರಾಮದಲ್ಲಿ ನಾಳೆ ಅಂತ್ಯಸಂಸ್ಕಾರ ನೆರವೇರಲಿದೆ. ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವರು ಸಂಸದರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...