alex Certify
ಕನ್ನಡ ದುನಿಯಾ       Mobile App
       

Kannada Duniya

‘ಲಾಲೂ ಪುತ್ರನ ಕಪಾಳಮೋಕ್ಷ ಮಾಡಿದವರಿಗೆ ಕೋಟಿ ರೂ. ಬಹುಮಾನ’

ರಾಜಕಾರಣಿಗಳ ನಡುವಿನ ಮಾತಿನ ಸಮರ ತಾರಕಕ್ಕೇರುತ್ತಿದೆ. ಬಿಹಾರದ ಮಾಜಿ ಸಚಿವ, ಆರ್.ಜೆ.ಡಿ.ನಾಯಕ ಲಾಲೂ ಪ್ರಸಾದ್ ಯಾದವ್ ರ ಪುತ್ರ ತೇಜ್ ಪ್ರತಾಪ್ ಯಾದವ್ ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯವರ ವಿರುದ್ದ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಮುಖಂಡರೊಬ್ಬರು ತೇಜ್ ಪ್ರತಾಪ್ ಯಾದವ್ ಗೆ ಕಪಾಳಮೋಕ್ಷ ಮಾಡಿದವರಿಗೆ ಒಂದು ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಈ ಹಿಂದೆ ತೇಜ್ ಪ್ರತಾಪ್, ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿಯವರನ್ನು ಅವರ ಮನೆಯಲ್ಲೇ ಹೊಡೆಯುತ್ತೇವೆ ಎಂದು ಹೇಳಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿತ್ತು. ತೇಜ್ ಪ್ರತಾಪ್ ಯಾದವ್ ರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸುಶೀಲ್ ಕುಮಾರ್ ಮೋದಿ, ಲಾಲೂ ಪ್ರಸಾದ್ ಯಾದವ್ ತಮ್ಮ ಪುತ್ರನಿಗೆ ಕಡಿವಾಣ ಹಾಕಬೇಕಿದೆ ಎಂದಿದ್ದರು.

ಇದೀಗ ಪಾಟ್ನಾ ಜಿಲ್ಲಾ ಬಿಜೆಪಿಯ ಮಾಧ್ಯಮ ವಕ್ತಾರ ಅನಿಲ್ ಸಾಹ್ನಿ, ತೇಜ್ ಪ್ರತಾಪ್ ಯಾದವ್ ಗೆ ಕಪಾಳಮೋಕ್ಷ ಮಾಡಿದವರಿಗೆ ಒಂದು ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಅನಿಲ್ ಸಾಹ್ನಿಯವರ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಅಂತರ ಕಾಯ್ದುಕೊಂಡಿರುವ ರಾಜ್ಯ ಬಿಜೆಪಿ, ಅದು ಅವರ ವೈಯಕ್ತಿಕ ಹೇಳಿಕೆಯಾಗಿದ್ದು, ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲವೆಂದು ಹೇಳಿದೆ. ಅಲ್ಲದೇ ಅನಿಲ್ ಸಾಹ್ನಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...