alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರಾಖಂಡ್ ನಲ್ಲಿ ಗೆಲುವಿನತ್ತ ಬಿಜೆಪಿ ನಾಗಾಲೋಟ

bjpಉತ್ತರಾಖಂಡ್ ನಲ್ಲಿ ಜಯಭೇರಿ ಬಾರಿಸುವತ್ತ ಬಿಜೆಪಿ ಹೆಜ್ಜೆ ಇಟ್ಟಿದೆ. ಒಟ್ಟು 70 ಕ್ಷೇತ್ರಗಳ ಪೈಕಿ ಈಗಾಗ್ಲೇ 41 ಕ್ಷೇತ್ರಗಳಲ್ಲಿ ಕಮಲ ಪಕ್ಷ ಮುನ್ನಡೆಯಲ್ಲಿದೆ. ಕಾಂಗ್ರೆಸ್ 12 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಬಿಎಸ್ಪಿ ಹಾಗೂ ಪಕ್ಷೇತರರು ತಲಾ ಒಂದೊಂದು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.

ಉತ್ತರಾಖಂಡ್ ನಲ್ಲಿ ಬಹುಮತದ ಮೂಲಕ ಸರ್ಕಾರ ರಚಿಸಲು 36 ಸ್ಥಾನಗಳ ಅವಶ್ಯಕತೆಯಿದ್ದು, ಈಗಾಗ್ಲೇ ಬಿಜೆಪಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿರೋದ್ರಿಂದ ಗೆಲುವು ನಿಶ್ಚಿತ ಅಂತಾ ಹೇಳಲಾಗ್ತಿದೆ. ಉತ್ತರಾಖಂಡ್ ನಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯನ್ನು ಸಹ ಘೋಷಣೆ ಮಾಡಿರಲಿಲ್ಲ. ಸಿಎಂ ಹರೀಶ್ ರಾವತ್ ಭಾರೀ ಜನಪ್ರಿಯತೆಯನ್ನು ಗಳಿಸಿಕೊಂಡಿದ್ರು. ಆದ್ರೂ ಉತ್ತರಾಖಂಡ್ ಜನತೆ ಕೇಸರಿ ಪಕ್ಷಕ್ಕೆ ಮಣೆ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...