alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ಅಪಘಾತದಲ್ಲಿ ಬಿಜೆಪಿ ಶಾಸಕ ದುರ್ಮರಣ

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್ ಸಾವನ್ನಪ್ಪಿದ್ದಾರೆ. ಹೆದ್ದಾರಿಯಲ್ಲಿ ಶಾಸಕರು ಚಲಿಸ್ತಾ ಇದ್ದ ಕಾರು, ಲಾರಿಗೆ ಡಿಕ್ಕಿ ಹೊಡೆದಿದೆ. ಲೋಕೇಂದ್ರ ಸಿಂಗ್, ಬಿಜ್ನೊರ್ ನ ನೂರ್ಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ರು.

ತಮ್ಮ ಸ್ವಂತ ವಾಹನ ಟೊಯೊಟಾ ಫಾರ್ಚುನರ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಶಾಸಕರು ಮತ್ತವರ ಇಬ್ಬರು ಅಂಗರಕ್ಷಕರು ಕೂಡ ಮೃತಪಟ್ಟಿದ್ದಾರೆ.

ಟ್ರಕ್ ಚಾಲಕನೂ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಶಾಸಕ ಲೋಕೇಂದ್ರ ಸಿಂಗ್ ಗೆ 41 ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅವರು ಅಗಲಿದ್ದಾರೆ. ಕಳೆದ ಮಾರ್ಚ್ ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆದ್ದಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...