alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಶಾಸಕರ ಶಾಲೆಗೆ ಬಾಂಬ್ ಬೆದರಿಕೆ ಕರೆ

satish-mahanaಕಾನ್ಪುರದ ಬಿಜೆಪಿ ಶಾಸಕ ಸತೀಶ್ ಮಹಾನ ಮಾಲೀಕತ್ವದ ಸರಸ್ವತಿ ವಿದ್ಯಾ ಮಂದಿರ ಶಾಲೆಯನ್ನು ಉಡಾಯಿಸುವುದಾಗಿ ಶಾಸಕರ ಮೊಬೈಲ್ ಗೆ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಆಗಮಿಸಿ ಪರಿಶೀಲಿಸಿದ್ದು, ಇದೊಂದು ಹುಸಿ ಕರೆ ಎಂಬುದು ಸಾಬೀತಾಗಿದೆ.

6 ರಿಂದ 12 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 900 ಮಕ್ಕಳು ಇಲ್ಲಿದ್ದು, ಇಂದು ಬೆಳಿಗ್ಗೆ ಶಾಸಕರ ಮೊಬೈಲ್ ಗೆ ಬೆದರಿಕೆ ಕರೆ ಬರುತ್ತಿದ್ದಂತೆಯೇ ಅವರು ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಬಾಂಬ್ ನಿಷ್ಕ್ರಿಯ ದಳದ ಜೊತೆಗೂಡಿ ಶಾಲೆಯನ್ನು ಸಂಪೂರ್ಣ ತಪಾಸಣೆ ಮಾಡಿದ್ದು, ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಶಾಸಕರ ಮೊಬೈಲ್ ಗೆ ಬಂದಿದ್ದ ನಂಬರ್ ಮೇಲೆ ನಿಗಾ ಇಟ್ಟಿರುವ ಪೊಲೀಸರು ಕರೆ ಯಾರು ಮಾಡಿರಬಹುದೆಂಬುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...