alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಎಸ್ಐ ಮೇಲೆ ಬಿಜೆಪಿ ಶಾಸಕನ ಗೂಂಡಾಗಿರಿ

ವಿವಾದಗಳಿಂದಲೇ ಸುದ್ದಿಯಲ್ಲಿರುವ ಉತ್ತರಾಖಂಡ ಬಿಜೆಪಿ ಶಾಸಕ ರಾಜ್ ಕುಮಾರ್ ಟಕ್ರಾಲ್ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ರುದ್ರಪುರ್ ಕ್ಷೇತ್ರದ ಶಾಸಕ, ಮಹಿಳಾ ಸಬ್ ಇನ್ಸ್ ಪೆಕ್ಟರ್ ವಿರುದ್ಧ ಗೂಂಡಾಗಿರಿ ಪ್ರದರ್ಶಿಸಿದ್ದಾರೆ.

ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರಿಂದ ಶಾಸಕರ ಇಬ್ಬರು ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದರು. ಇದನ್ನು ಪ್ರಶ್ನಿಸಿದ ಬಿಜೆಪಿ ಶಾಸಕ, ರುದ್ರಪುರ್ ನಗರದ ಸಂಚಾರಿ ಸಬ್ ಇನ್ಸ್ ಪೆಕ್ಟರ್ ಅನಿತಾ ಗೈರೊಲ್ ಮೇಲೆ ದರ್ಪ ಮೆರೆದಿದ್ದಾರೆ. ಅಲ್ಲದೆ ಸಾರ್ವಜನಿಕರ ಸಮ್ಮುಖದಲ್ಲಿಯೇ ನಿಂದಿಸಿ ಬೆದರಿಕೆ ಹಾಕಿರುವ ವಿಡಿಯೋ ವೈರಲ್ ಆಗ್ತಾ ಇದೆ.

ಶಾಸಕ ಎನ್ನೋದನ್ನೆ ಮರೆತ ರಾಜ್ ಕುಮಾರ್, ಠಾಣೆಯ ಮುಂಭಾಗದಲ್ಲಿ ಅನಿತಾರ ವಿರುದ್ಧ ಹರಿಹಾಯ್ದಿದ್ದಾರೆ. ಈ ದೃಶ್ಯವನ್ನ ಅಲ್ಲಿಯೇ ಇದ್ದ ಪ್ರತ್ಯಕ್ಷದರ್ಶಿ ಸಾಮಾಜಿಕ ತಾಣದಲ್ಲಿ ಅಪ್ ಲೋಡ್ ಮಾಡಿದ್ದು, ಶಾಸಕನ ವಿರುದ್ದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...