alex Certify
ಕನ್ನಡ ದುನಿಯಾ       Mobile App
       

Kannada Duniya

ನಾನವನಲ್ಲ ಎಂದ ಬಿಜೆಪಿ ಶಾಸಕ..!

bjp_embed_screenshotಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಲು ಮುಂದಾಗಿದೆ. ಇದಕ್ಕಾಗಿ ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ತುರ್ತು ಸಂದರ್ಭ ಹೊರತುಪಡಿಸಿ ವಿಐಪಿಗಳು ತಮ್ಮ ಕಾರಿನ ಮೇಲೆ ಕೆಂಪು ದೀಪ ಅಳವಡಿಸಿಕೊಳ್ಳಬಾರದೆಂದು ನಿರ್ಧರಿಸಲಾಗಿದೆ.

ಇದಕ್ಕೆ ಬಹುತೇಕ ವಿಐಪಿಗಳಿಂದ ಸಹಮತ ವ್ಯಕ್ತವಾಗಿದ್ದು, ತಮ್ಮ ಕಾರಿನ ಮೇಲೆ ಅಳವಡಿಸಲಾಗಿದ್ದ ಕೆಂಪು ದೀಪವನ್ನು ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿದ್ದಾರೆ. ಈ ಮಧ್ಯೆ ಟೋಲ್ ಪ್ಲಾಜಾದಲ್ಲಿ ತನ್ನ ಹಾಗೂ ಬೆಂಬಲಿಗರ ವಾಹನ ಸಾಗಲು ಕೇವಲ 10 ಸೆಕೆಂಡ್ ತಡವಾಗಿದೆ ಎಂಬ ಕಾರಣಕ್ಕೆ ಬಿಜೆಪಿ ಶಾಸಕನೊಬ್ಬ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಉತ್ತರ ಪ್ರದೇಶದ ಸೀತಾಪುರ್ ಕ್ಷೇತ್ರದ ಬಿಜೆಪಿ ಶಾಸಕ ರಾಕೇಶ್ ರಾಥೋಡ್ ತಮ್ಮ ಹಾಗೂ ಬೆಂಬಲಿಗರ ವಾಹನವನ್ನು ಬರೇಲಿ ಬಳಿಯ ಟೋಲ್ ಪ್ಲಾಜಾದಲ್ಲಿ ತಡೆ ಹಿಡಿದಿದ್ದಾರೆಂಬ ಕಾರಣಕ್ಕಾಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆದರೆ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿರುವ ರಾಕೇಶ್ ರಾಥೋಡ್ ವಿಡಿಯೋದಲ್ಲಿರುವುದು ನಾನಲ್ಲ. ಬಿಸ್ವಾ ಕ್ಷೇತ್ರದ ಸಮಾಜವಾದಿ ಪಕ್ಷದ ನಾಯಕ ಮಹೇಂದ್ರ ಯಾದವ್ ಈ ಕೃತ್ಯವೆಸಗಿದ್ದು, ವೃಥಾ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...