alex Certify
ಕನ್ನಡ ದುನಿಯಾ       Mobile App
       

Kannada Duniya

ಜೈರಾಮ್ ಠಾಕೂರ್ ಗೆ ಒಲಿದು ಬಂದ ಸಿ.ಎಂ. ಹುದ್ದೆ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಜಯದೊಂದಿಗೆ ಅಧಿಕಾರಕ್ಕೆ ಬಂದಿರುವ ಬಿ.ಜೆ.ಪಿ. ಶಾಸಕಾಂಗ ಸಭೆ ಇಂದು ನಡೆದಿದ್ದು, ಶಾಸಕಾಂಗ ನಾಯಕರಾಗಿ ಜೈರಾಮ್ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿಯಾಗಿ ಜೈರಾಮ್ ಠಾಕೂರ್ ಅವರನ್ನು ಬಿ.ಜೆ.ಪಿ. ವರಿಷ್ಠರು ಹಾಗೂ ಶಾಸಕರು ಆಯ್ಕೆ ಮಾಡಿದ್ದು, 5 ಬಾರಿ ಶಾಸಕರಾದ ಅವರಿಗೆ ಮುಖ್ಯಮಂತ್ರಿ ಹುದ್ದೆ ಒಲಿದು ಬಂದಿದೆ.

ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರೇಮ್ ಕುಮಾರ್ ಧುಮಾಲ್ ಅವರನ್ನು ಬಿ.ಜೆ.ಪಿ. ಆಯ್ಕೆ ಮಾಡಿತ್ತಾದರೂ, ಅವರು ಚುನಾವಣೆಯಲ್ಲಿ ಸೋಲು ಕಂಡಿದ್ದರು. ಪಕ್ಷ ಅಧಿಕಾರಕ್ಕೆ ಬಂದರೂ ಅವರು ಕೈ ಕೈ ಹಿಸುಕಿಕೊಳ್ಳುವಂತಾಗಿತ್ತು.

ಹಿಮಾಚಲ ಪ್ರದೇಶದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಗೆ ಬಿ.ಜೆ.ಪಿ. ವೀಕ್ಷಕರನ್ನು ನೇಮಿಸಿದ್ದು, ಭಾನುವಾರ ನಡೆದ ಸಭೆಯಲ್ಲಿ ಜೈರಾಮ್ ಠಾಕೂರ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...