alex Certify
ಕನ್ನಡ ದುನಿಯಾ       Mobile App
       

Kannada Duniya

”ಮೂರು ವರ್ಷದಲ್ಲಿ ವೇಗವಾಗಿ ಬೆಳೆದಿದೆ ದೇಶ”

amit-shah-1

ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎನ್ ಡಿ ಎ ಸರ್ಕಾರದ ಸಾಧನೆಯನ್ನು ಶ್ಲಾಘಿಸಿದ್ದಾರೆ. ಸೋಮವಾರ ಮಾತನಾಡಿದ ಅವರು, ಎನ್ ಡಿ ಎ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ದೇಶದಲ್ಲಿ ಕ್ಷಿಪ್ರಗತಿಯಲ್ಲಿ ಬದಲಾವಣೆಯಾಗಿದೆ. ವಿಶ್ವಮಟ್ಟದಲ್ಲಿ ಆರ್ಥಿಕವಾಗಿ ಅತಿ ವೇಗದಲ್ಲಿ ಬೆಳೆಯುತ್ತಿರುವ ದೇಶವಾಗಿ ಭಾರತ ಹೊರಹೊಮ್ಮಿದೆ ಎಂದು ಹೇಳಿದ್ದಾರೆ.

ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಅಮಿತ್ ಶಾ, ಉತ್ತರ ಪ್ರದೇಶ ಸರ್ಕಾರ ಮೂರು ತಿಂಗಳು ಪೂರೈಸಿದೆ. ಕೇಂದ್ರದಲ್ಲಿ ಮೋದಿ ಸರ್ಕಾರ ಮೂರು ವರ್ಷ ಪೂರೈಸಿದೆ. ಹಿಂದಿನ ಸರ್ಕಾರದಲ್ಲಿ 12 ಲಕ್ಷ ಕೋಟಿ ವಂಚನೆ ಬೆಳಕಿಗೆ ಬಂದಿದೆ. ಮೂರು ವರ್ಷದಲ್ಲಿ ಎನ್ ಡಿ ಎ ಸರ್ಕಾರದ ಮೇಲೆ ಯಾವುದೇ ಆರೋಪವಿಲ್ಲವೆಂದಿದ್ದಾರೆ.

ಹಿಂದಿನ ಸರ್ಕಾರದಲ್ಲಿ ಎಲ್ಲರೂ ತಾವು ಪ್ರಧಾನ ಮಂತ್ರಿ ಎಂದುಕೊಂಡಿದ್ದರು. ನಮ್ಮ ಸರ್ಕಾರ ಮೂರು ವರ್ಷದಲ್ಲಿ 50 ಮಹತ್ವಪೂರ್ಣ ಕೆಲಸ ಮಾಡಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...