alex Certify
ಕನ್ನಡ ದುನಿಯಾ       Mobile App
       

Kannada Duniya

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಕಸರತ್ತಿನಲ್ಲಿ ಎನ್ ಡಿ ಎ

bjp

ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯುತ್ತಿದೆ. ಈ ಮಧ್ಯೆ ಎನ್ ಡಿ ಎ ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ಶುರುಮಾಡಿದೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಎನ್ ಡಿ ಎ ಯ ಉಪರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ.

ಸಂಸದೀಯ ಮಂಡಳಿ ಸದಸ್ಯರೊಬ್ಬರ ಹೇಳಿಕೆ ಪ್ರಕಾರ, ಇಂದು ಸಂಜೆ ಸಭೆ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್ ಸೇರಿದಂತೆ 18 ವಿರೋಧ ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿವೆ. ಮಹಾತ್ಮಾ ಗಾಂಧಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿಯವರನ್ನು ತಮ್ಮ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿವೆ.

ಉಪರಾಷ್ಟ್ರಪತಿ ಚುನಾವಣೆ ಆಗಸ್ಟ್ 5ರಂದು ನಡೆಯಲಿದೆ. ನಾಮಪತ್ರ ಸಲ್ಲಿಸಲು ಜುಲೈ 18 ಕೊನೆಯ ದಿನವಾಗಿದೆ. ಹಾಗಾಗಿ ಇಂದು ಎನ್ ಡಿ ಎ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದು, ನಾಳೆ ನಾಮಪತ್ರ ಸಲ್ಲಿಸಲಾಗ್ತಾ ಇದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...