alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಸಭಾ ಚುನಾವಣೆ ಜೊತೆಗೆ 11 ರಾಜ್ಯಗಳ ಚುನಾವಣೆ ನಡೆಸಲು ಬಿಜೆಪಿ ಪ್ಲಾನ್?

ಬಿಜೆಪಿಯು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಜೊತೆಗೆ 11 ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಜೊತೆಯಾಗಿ ನಡೆಸಲು ಚಿಂತಿಸುತ್ತಿದೆ ಎಂದು ತಿಳಿದು ಬಂದಿದೆ.

11 ರಾಜ್ಯಗಳ ಪೈಕಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಘಡ, ಮಿಜೋರಾಂಗಳಲ್ಲಿ ಈ ವರ್ಷವೇ ಚುನಾವಣಿ ನಡೆಯಬೇಕಾಗಿದೆ. ಹಾಗೂ ಒರಿಸ್ಸಾ, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ.

ಈ ವರ್ಷವೇ ಚುನಾವಣೆ ನಡೆಯಬೇಕಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಘಡ, ಮಿಜೋರಾಂಗಳಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿ ಮುಂದಿನ ವರ್ಷ ಲೋಕಸಭಾ ಚುನಾವಣೆಯ ಜೊತೆ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಇದರ ಜೊತೆಗೆ ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ಬಿಹಾರದಲ್ಲಿ ಅವಧಿಗಿಂತ ಮುಂಚಿತವಾಗಿ ವಿಧಾನಸಭಾ ಚುನಾವಣೆಯನ್ನು ಘೋಷಿಸಿ ಲೋಕಸಭಾ ಚುನಾವಣೆಯ ಜೊತೆ ಚುನಾವಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...