alex Certify
ಕನ್ನಡ ದುನಿಯಾ       Mobile App
       

Kannada Duniya

UP ಸಿಎಂ ರೇಸ್ ನಲ್ಲಿದ್ದಾರೆ ಐವರು

five-leaders-being-talked-about-for-the-cms-postಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಜಯಗಳಿಸುವ ಮೂಲಕ ಅಧಿಕಾರದ ಗದ್ದುಗೆಗೇರಲು ಸಜ್ಜಾಗಿದೆ. 15 ವರ್ಷಗಳ ಬಳಿಕ ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಸಹಜವಾಗಿಯೇ ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ ಎಂಬ ಕುತೂಹಲ ಮನೆ ಮಾಡಿದೆ.

ಮುಖ್ಯಮಂತ್ರಿ ಗಾದಿಗಾಗಿ ಹಲವರ ಹೆಸರು ಕೇಳಿ ಬರುತ್ತಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕೇಂದ್ರ ಟೆಲಿಕಾಂ ಸಚಿವ ಮನೋಜ್ ಸಿನ್ಹಾ, ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ, ಕೇಂದ್ರ ಪ್ರವಾಸೋದ್ಯಮ ಸಚಿವ ಮಹೇಶ್ ಶರ್ಮಾ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿನೇಶ್ ಶರ್ಮಾರ ಹೆಸರು ಮುಂಚೂಣಿಯಲ್ಲಿವೆ.

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಲೆಕ್ಕಾಚಾರದಲ್ಲಿ ಬಿಜೆಪಿಯಿದ್ದು, ಅಭ್ಯರ್ಥಿ ಆಯ್ಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾರ ನಿರ್ಧಾರವೇ ಅಂತಿಮವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...