alex Certify
ಕನ್ನಡ ದುನಿಯಾ       Mobile App
       

Kannada Duniya

ಮೂರು ದಶಕಗಳ ಮೈತ್ರಿ ಕೊನೆಗೂ ಅಂತ್ಯ…!

ಮಹಾರಾಷ್ಟ್ರದಲ್ಲಿ ಕಳೆದ ಮೂರು ದಶಕಗಳಿಂದ ಸುದೀರ್ಘ ರಾಜಕೀಯ ಮೈತ್ರಿ ಮಾಡಿಕೊಂಡು ಬಂದಿದ್ದ ಬಿಜೆಪಿ ಹಾಗೂ ಶಿವಸೇನೆ ದೋಸ್ತಿ ಕಡೆಗೂ ಅಂತ್ಯಗೊಳ್ಳುವ ಹಂತ ತಲುಪಿದೆ.

ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಏಕಾಂಗಿ ಸ್ಪರ್ಧೆಗೆ ಸಿದ್ಧವಾಗಿರುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡುವ ಮೂಲಕ ಶಿವಸೇನೆಯೊಂದಿಗಿನ ಮೈತ್ರಿ ಕಡಿದುಕೊಳ್ಳುವ ಸಂದೇಶ ರವಾನಿಸಿದ್ದಾರೆ.

ಕಳೆದ ಕೆಲ ತಿಂಗಳುಗಳಿಂದ ಮಿತ್ರ ಪಕ್ಷ ಬಿಜೆಪಿ ಸರ್ಕಾರದ ಆಡಳಿತ ವೈಖರಿಯನ್ನು ಕಟು ಶಬ್ದಗಳಲ್ಲಿ ಖಂಡಿಸುತ್ತಾ ಬಂದಿದ್ದ ಶಿವಸೇನೆ ನಾಯಕರು, ಮುಂಬರುವ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯುವ ಮಾತುಗಳನ್ನಾಡಿದ್ದರು. ಈಗ ಇದಕ್ಕೆ ಪೂರಕವೆಂಬಂತೆ ಅಮಿತ್ ಷಾ ಕೂಡ ಶಿವಸೇನೆಯೊಂದಿಗಿನ ಮೈತ್ರಿ ಕಡಿದುಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...