alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ- ಮತ್ತೆ ಶಾಕ್ ಕೊಟ್ಟ ಮೋದಿ

ramnath-jpg_1497861863_749x421

ಬಿಹಾರದ ರಾಜ್ಯಪಾಲ ರಾಮ್ನಾಥ್ ಕೋವಿಂದ್ ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಸಂಸದೀಯ ಸಭೆ ನಂತ್ರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಮ್ನಾಥ್ ಕೋವಿಂದ್ ಹೆಸರನ್ನು ಘೋಷಣೆ ಮಾಡಿದ್ದಾರೆ.

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೀಯ ಸಭೆ ಸುಮಾರು 1 ಗಂಟೆಗೂ ಹೆಚ್ಚು ಕಾಲ ನಡೆಯಿತು. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಸುಷ್ಮಾ ಸ್ವರಾಜ್, ವೆಂಕಯ್ಯ ನಾಯ್ಡು ಸೇರಿದಂತೆ ಬಿಜೆಪಿ ಹಿರಿಯ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಮೂಲಗಳ ಪ್ರಕಾರ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಅಂತಿಮ ಹೊಣೆಯನ್ನು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೇಲೆ ಹೊರಿಸಲಾಗಿತ್ತು. ಅಮಿತ್ ಶಾ ಜೊತೆ ಪ್ರತ್ಯೇಕವಾಗಿ ಮೋದಿ ಮಾತುಕತೆ ಕೂಡ ನಡೆಸಿದ್ದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಅಮಿತ್ ಶಾ ಎನ್ ಡಿ ಎ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದ್ರು. ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಕುತೂಹಲ ಮನೆ ಮಾಡಿತ್ತು. ಅನೇಕ ನಾಯಕರ ಹೆಸರುಗಳು ಕೇಳಿ ಬರ್ತಾ ಇದ್ವು. ಆದ್ರೆ ಎಲ್ಲರಿಗೂ ಆಶ್ಚರ್ಯವಾಗುವಂತೆ ರಾಮ್ನಾಥ್ ಕೋವಿಂದ್ ಹೆಸರನ್ನು ಎನ್ ಡಿ ಎ ಘೋಷಣೆ ಮಾಡಿದೆ.

ಜೂನ್ 28ರಂದು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನ. ಜೂನ್ 24ರಿಂದ 27ರವರೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಹಾಗಾಗಿ ರಾಷ್ಟ್ರಪತಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿ ಪ್ರಧಾನಿ ಉಪಸ್ಥಿತಿಯಲ್ಲಿಯೇ ನಾಮಪತ್ರ ಸಲ್ಲಿಕೆ ನಡೆಯಲಿದೆ.
ಎಲ್ಲ ಪಕ್ಷಗಳು ರಾಮ್ನಾಥ್ ಕೋವಿಂದ್ ಅವರನ್ನು ಒಮ್ಮತದಿಂದ ರಾಷ್ಟ್ರಪತಿ ಪಟ್ಟಕ್ಕೇರಿಸಲಿ ಎಂಬುದು ಬಿಜೆಪಿ ಅಭಿಲಾಷೆಯಾಗಿದೆ. ಹಾಗಾಗಿ  ಬಿಜೆಪಿ ಯುಪಿಎ ನಾಯಕರ ಜೊತೆ ಈ ಬಗ್ಗೆ ಮಾತುಕತೆ ನಡೆಸಿದೆ. ಯುಪಿಎ ಈವರೆಗೂ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿಲ್ಲ. ಬಿಜೆಪಿ ಆಯ್ಕೆಗೆ ಯಸ್ ಎನ್ನುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...