alex Certify
ಕನ್ನಡ ದುನಿಯಾ       Mobile App
       

Kannada Duniya

ದಿಢೀರ್ ನಿರ್ಧಾರ ಬದಲಿಸಿದ ಬಿ.ಜೆ.ಪಿ.

mh-cm

ಮುಂಬೈ: ಮುಂಬೈ ಮಹಾನಗರ ಪಾಲಿಕೆ(ಬಿ.ಎಂ.ಸಿ.) ಮೇಯರ್ ಮತ್ತು ಉಪಮೇಯರ್ ಸ್ಥಾನವನ್ನು, ತನ್ನ ವಶಕ್ಕೆ ಪಡೆದುಕೊಳ್ಳಲು ಅಗತ್ಯ ಬೆಂಬಲ ಒಟ್ಟುಗೂಡಿಸುತ್ತಿದ್ದ ಬಿ.ಜೆ.ಪಿ. ತನ್ನ ನಿರ್ಧಾರವನ್ನು ಬದಲಿಸಿದೆ.

ಮೇಯರ್ ಸ್ಥಾನಕ್ಕಾಗಿ ಕಾರ್ಯತಂತ್ರ ರೂಪಿಸಿದ್ದ ಬಿ.ಜೆ.ಪಿ. ತೀರ್ಮಾನ ಬದಲಿಸಿ ಚುನಾವಣೆಯಿಂದ ಹಿಂದೆ ಸರಿದಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಬಿ.ಎಂ.ಸಿ. ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ತಿಳಿಸಿದ್ದಾರೆ.

ನಾವು ವಿರೋಧ ಪಕ್ಷದಲ್ಲಿ ಕೂರಲು ಇಷ್ಟಪಡುವುದಿಲ್ಲ. ಮೇಯರ್, ಉಪಮೇಯರ್, ಸ್ಥಾಯಿ ಸಮಿತಿ ಚುನಾವಣೆಗೆ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸುವುದಿಲ್ಲ. ಅಗತ್ಯವಾದರೆ ಶಿವಸೇನೆಯನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

ಬಿ.ಜೆ.ಪಿ. ಮತ್ತು ಶಿವಸೇನೆ ಮೈತ್ರಿ ಪಕ್ಷಗಳಾಗಿದ್ದರೂ, ಬಿ.ಎಂ.ಸಿ. ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದೇ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಶಿವಸೇನೆ, ಮೇಯರ್, ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಘೋಷಿಸಲು ತಯಾರಿ ನಡೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...