alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಬಹುಮತದತ್ತ ಸಾಗಿದ್ರೂ ಪ್ಲಾನ್ ಬಿ ಶುರು ಮಾಡಿದ ಅಮಿತ್ ಶಾ

ಕರ್ನಾಟಕ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದೆ. ಕಾಂಗ್ರೆಸ್ ಗೆ ಮುಖಭಂಗವಾಗ್ತಿದ್ದು, ಜೆಡಿಎಸ್ ಕಿಂಗ್ ಮೇಕರ್ ಆಗುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಬಿಜೆಪಿ 118 ಕ್ಷೇತ್ರಗಳಲ್ಲಿ ಸದ್ಯ ಮುನ್ನಡೆಯಲ್ಲಿದೆ. ಅಧಿಕಾರಕ್ಕೆ ಬರಲು 113 ಗೆಲುವು ಅವಶ್ಯಕ. ಗೆಲುವಿನ ನಂಬರ್ ಕಡಿಮೆಯಾದ್ರೆ ಮುಂದೇನು ಮಾಡಬೇಕು ಎಂಬ ಪ್ರಶ್ನೆಗೆ ಬಿಜೆಪಿ ಈಗಾಗಲೇ ಪ್ಲಾನ್ ಶುರು ಮಾಡಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ಲಾನ್ ಬಿ ಶುರು ಮಾಡಿದ್ದಾರೆ.

ಮೊದಲು ಬಿಜೆಪಿ ಸ್ವತಂತ್ರ ಅಭ್ಯರ್ಥಿಗಳ ಜೊತೆ ಸರ್ಕಾರ ರಚಿಸುವ ಪ್ರಯತ್ನ ನಡೆಸಲಿದೆ. ಅದೂ ಅಸಾಧ್ಯ ಎಂದಾಗ ಜೆಡಿಎಸ್ ಜೊತೆ ಸರ್ಕಾರ ರಚಿಸುವ ಸಿದ್ಧತೆಯಲ್ಲಿ ಬಿಜೆಪಿಯಿದೆ. 100 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ ಅಮಿತ್ ಶಾ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಜೊತೆ ಮಾತುಕತೆ ನಡೆಸಿದ್ದಾರೆ.

ಅಮಿತ್ ಶಾ ಜೊತೆ ಮಾತುಕತೆ ನಡೆಸಿದ ನಂತ್ರ ಜಾವಡೇಕರ್ ಬೆಂಗಳೂರಿಗೆ ಹೊರಟಿದ್ದಾರೆ. ಬೆಂಗಳೂರಿಗೆ ಬಂದ ನಂತ್ರ ಜಾವಡೇಕರ್ ಪ್ಲಾನ್ –ಬಿ ಮೇಲೆ ಗಮನ ನೀಡಲಿದ್ದಾರೆ. ಬಿಜೆಪಿ ಶಾಸಕರು, ಸ್ವತಂತ್ರ ಅಭ್ಯರ್ಥಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ. ಆ ನಂತ್ರ ಜೆಡಿಎಸ್ ಜೊತೆ ಮಾತುಕತೆ ನಡೆಸಲಿದ್ದಾರೆ. ಜೆಡಿಎಸ್ ಜೊತೆ ಕೈ ಜೋಡಿಸಲು ನಮ್ಮದೇನು ಅಭ್ಯಂತರವಿಲ್ಲವೆಂದು ಈಗಾಗ್ಲೇ ಬಿಜೆಪಿ ಹೇಳಿದೆ.

ಇತ್ತ ಕಾಂಗ್ರೆಸ್ ಕೂಡ ಸೋಮವಾರದಿಂದಲೇ ಪ್ಲಾನ್ ಬಿ ಶುರು ಮಾಡಿದೆ. ಜೆಡಿಎಸ್ ಜೊತೆ ಕೈ ಜೋಡಿಸುವ ಪ್ರಯತ್ನ ಮುಂದುವರೆಸಿದೆ. ಅಂತಿಮ ಫಲಿತಾಂಶ ಬಂದ ನಂತ್ರ ಮುಂದಿನ ನಡೆ ತಿಳಿಯಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...