alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿ ಉಪ ಚುನಾವಣೆಯಲ್ಲಿ ಆಪ್ ಗೆ ಮುಖಭಂಗ

aapದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಅಧಿಕಾರದ ಗದ್ದುಗೆಗೇರಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ, ಏಪ್ರಿಲ್ 9 ರಂದು ನಡೆದಿದ್ದ ರಜೌರಿ ಗಾರ್ಡನ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವ ಮೂಲಕ ಭಾರೀ ಮುಖಭಂಗಕ್ಕೊಳಗಾಗಿದೆ.

ರಜೌರಿ ಗಾರ್ಡನ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಆಮ್ ಆದ್ಮಿ ಪಾರ್ಟಿ ಶಾಸಕ ಜರ್ನೈಲ್ ಸಿಂಗ್ ಇತ್ತೀಚೆಗೆ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರಜೌರಿ ಗಾರ್ಡನ್ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು.

ಈ ಕ್ಷೇತ್ರದಲ್ಲಿ ಬಿಜೆಪಿಯ ಮಂಜಿಂದರ್ ಸಿಂಗ್ ಸಿರ್ಸಾ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಮೀನಾಕ್ಷಿ ಚಂಡೇಲಾ ವಿರುದ್ದ ಜಯ ಸಾಧಿಸಿದ್ದಾರೆ. ಆಮ್ ಆದ್ಮಿ ಪಾರ್ಟಿಯಿಂದ ಕಣಕ್ಕಿಳಿದಿದ್ದ ಹರ್ಜಿತ್ ಸಿಂಗ್ ಠೇವಣಿ ಕಳೆದುಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...