alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಧಾನಿ ಮೋದಿ ಸಮಾವೇಶದಲ್ಲಿ ಪೊಲೀಸರ ಮೇಲೆ ಹಲ್ಲೆ

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದೇ ಇದ್ದ ಕಾರಣಕ್ಕೆ ಸುಮಾರು 12 ಮಂದಿ ಪೊಲೀಸರಿಗೆ ಸಾರ್ವಜನಿಕರು ಥಳಿಸಿದ್ದಾರೆ

ಸಮಾವೇಶಕ್ಕೆ ಆಗಮಿಸುತ್ತಿದ್ದ ಬಿಜೆಪಿ ಬೆಂಬಲಿಗರ ಬಸ್‌, ವಾಹನಗಳನ್ನು ಕೊಂಚ ದೂರದಲ್ಲಿ ನಿಲ್ಲಿಸಿ, ನಡೆದು ಸಾಗುವಂತೆ ಹೇಳಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಖರಘ್‌ಪುರ ಆಸ್ಪತ್ರೆಗೆ ಸುಮಾರು 7 ಮಂದಿ ಪೊಲೀಸರು ದಾಖಲಾಗಿದ್ದಾರೆ.

ಈ ಘಟನೆ ಕುರಿತು ಸಿಎಂ ಮಮತಾ ಬ್ಯಾನರ್ಜಿ ಅವರ ಗಮನಕ್ಕೆ ತರಲಾಗಿದ್ದರೂ, ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್, ಪೊಲೀಸರು ಬಿಜೆಪಿ ಬೆಂಬಲಿಗರೊಂದಿಗೆ ಸರಿಯಾಗಿ ವರ್ತಿಸಿಲ್ಲ ಎಂಬ ಮಾಹಿತಿ ಇದೆ. ಆದರೂ ಇಂತಹ ಘಟನೆ ನಡೆಯಬಾರದು. ಘಟನೆ ಬಗ್ಗೆ ಬೇಸರವಿದೆ ಎಂದು ಹೇಳಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿರುವುದು ತಪ್ಪು. ಈ ಕುರಿತು ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಡಿಜಿಪಿ ಅನುಜ್‌ ಶರ್ಮ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...