alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ಹಯ್ಯ ಕುಮಾರ್ ನಾಲಿಗೆ ಕತ್ತರಿಸಲು ಕರೆ ನೀಡಿದ ಬಿಜೆಪಿ ಮುಖಂಡ

kuldeep-varshney

ದೇಶದ್ರೋಹದ ಆರೋಪದ ಮೇಲೆ ಬಂಧಿತರಾಗಿ ಈಗ ಜಾಮೀನಿನ ಮೇಲೆ ಹೊರ ಬಂದಿರುವ ದೆಹಲಿ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ನಾಲಿಗೆ ಕತ್ತರಿಸಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ವ್ಯಕ್ತಿಯೊಬ್ಬರು ಘೋಷಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಬದೌನ್ ಜಿಲ್ಲಾ ಘಟಕದ ಯುವ ಮೋರ್ಚಾ ಮುಖಂಡ ಕುಲದೀಪ್ ಈ ಕರೆ ನೀಡಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಕನ್ಹಯ್ಯ ಕುಮಾರ್, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಟೀಕೆ ಮಾಡುತ್ತಿದ್ದು, ಅವರ ನಾಲಿಗೆ ಕತ್ತರಿಸಿದವರಿಗೆ 5 ಲಕ್ಷ ರೂ. ನೀಡುವುದಾಗಿ ಹೇಳಿದ್ದಾರೆ.

ಯುವ ಮೋರ್ಚಾ ಮುಖಂಡ ಈ ಹೇಳಿಕೆ ನೀಡುತ್ತಿದ್ದಂತೆಯೇ ಈಗ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಫೆಬ್ರವರಿ 12 ರಂದು ಬಂಧಿತರಾಗಿದ್ದ ಕನ್ಹಯ್ಯ ಕುಮಾರ್ ಮಾರ್ಚ್ 3 ರಂದು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು, ಈ ವೇಳೆ ಮಾತನಾಡಿದ್ದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...