alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಸಭೆ ಸದಸ್ಯರಾಗಿ ‘ದ್ರೌಪದಿ’

roopa

ನವದೆಹಲಿ: ಕಿರುತೆರೆಯಲ್ಲಿ ಪ್ರಸಾರವಾದ ಮಹಾಭಾರತ ಧಾರಾವಾಹಿಯಲ್ಲಿ ದ್ರೌಪದಿ ಪಾತ್ರದಲ್ಲಿ ಅಭಿನಯಿಸಿದ್ದ ನಟಿ ರೂಪಾ ಗಂಗೂಲಿ ರಾಜ್ಯಸಭೆಗೆ ನಾಮಕರಣಗೊಂಡಿದ್ದಾರೆ.

ಬಾಲಿವುಡ್, ಸ್ಯಾಂಡಲ್ ವುಡ್ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ರೂಪಾ ಗಂಗೂಲಿ, ಮೂಲತಃ ಪಶ್ಚಿಮ ಬಂಗಾಳದವರಾಗಿದ್ದು, 2015 ರಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಿದ್ದರು. ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೆ ಸ್ಪರ್ಧಿಸಿ, ತೃಣಮೂಲ ಕಾಂಗ್ರೆಸ್ ಪಕ್ಷದ ಲಕ್ಷ್ಮಿ ರತನ್ ಶುಕ್ಲಾ ಅವರ ವಿರುದ್ಧ ಸೋಲು ಕಂಡಿದ್ದರು.

ನಟಿಯಾಗಿ, ಹಿಮ್ಮೇಳ ಗಾಯಕಿಯಾಗಿ ಹೆಸರು ಮಾಡಿರುವ ರೂಪಾ ಗಂಗೂಲಿ ಅವರನ್ನು ನವಜೋತ್ ಸಿಂಗ್ ಸಿಧು ಅವರ ರಾಜೀನಾಮೆಯಿಂದ ತೆರವಾದ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಾಮಕರಣ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...