alex Certify
ಕನ್ನಡ ದುನಿಯಾ       Mobile App
       

Kannada Duniya

ಕಪ್ಪು ಹಣದ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ

black-money

ಕಪ್ಪು ಹಣ ಹಾಗೂ ಭ್ರಷ್ಟಾಚಾರದ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಈಗಾಗಲೇ 500 ಹಾಗೂ 1000 ರೂ. ಮುಖ ಬೆಲೆಯ ನೋಟುಗಳನ್ನು ನಿಷೇಧಿಸಿದೆ. ಕೇಂದ್ರ ಸರ್ಕಾರದ ಈ ಘೋಷಣೆ ಕಪ್ಪು ಹಣವುಳ್ಳವರ ನಿದ್ದೆಗೆಡಿಸಿದೆ. ಕಪ್ಪನ್ನು ಬಿಳಿ ಮಾಡಿಕೊಳ್ಳಲು ಇನ್ನಿಲ್ಲದ ಕಸರತ್ತು ಮಾಡ್ತಿದ್ದಾರೆ. ಆದ್ರೆ ಕಪ್ಪು ಹಣವುಳ್ಳವರ ಬೆನ್ನು ಬಿದ್ದಿದೆ ಕೇಂದ್ರ ಸರ್ಕಾರ.

ಸ್ಥಳೀಯ ಪೊಲೀಸ್, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಗುಪ್ತಚರ ಇಲಾಖೆ ಕಪ್ಪು ಹಣ ಪತ್ತೆ ಹಚ್ಚುವಲ್ಲಿ ನಿರತವಾಗಿದೆ. ದಿನ ದಿನಕ್ಕೂ ಲಕ್ಷಾಂತರ ರೂಪಾಯಿ ಹೊಸ ಹಾಗೂ ಹಳೆ ನೋಟುಗಳನ್ನು ವಶಕ್ಕೆ ಪಡೆಯುತ್ತಿದೆ. ಈ ನಡುವೆ ಸಾರ್ವಜನಿಕರು ಕಪ್ಪುಹಣದ ವಿರುದ್ಧ ಮಾಹಿತಿ ನೀಡುವಂತೆ ಸರ್ಕಾರ ಮನವಿ ಮಾಡಿದೆ.

ಈ ಬಗ್ಗೆ ಮಾತನಾಡಿದ ಕಂದಾಯ ಕಾರ್ಯದರ್ಶಿ ಹಸ್ಮುಕ್ ಅಧಿಯಾ, ಕಪ್ಪುಹಣದ ಬಗ್ಗೆ ಮಾಹಿತಿ ನೀಡಿದವರ ಹೆಸರನ್ನು ಗುಪ್ತವಾಗಿಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಕಪ್ಪುಹಣದ ಬಗ್ಗೆ ಮಾಹಿತಿ ನೀಡಿದವರಿಗೆ ಸೂಕ್ತ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ. [email protected] ನಲ್ಲಿ ಕಪ್ಪುಹಣದ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...