alex Certify
ಕನ್ನಡ ದುನಿಯಾ       Mobile App
       

Kannada Duniya

ದೋಣಿ ದುರಂತದಲ್ಲಿ 11 ಸಾವು : 20 ಮಂದಿ ನಾಪತ್ತೆ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಇಬ್ರಾಹಿಂಪಟ್ಟಣದ ಬಳಿ ಭೀಕರ ದೋಣಿ ದುರಂತ ಸಂಭವಿಸಿದೆ. ಕೃಷ್ಣಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವನ್ನಪ್ಪಿದ್ದು, 20 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ಸಿಂಪಲ್ ವಾಟರ್ ಸಂಸ್ಥೆಗೆ ಸೇರಿದ ಬೋಟ್ ನಲ್ಲಿ 35 ಮಂದಿ ಪ್ರಯಾಣಿಕರಿದ್ದರು. ಈ ಬೋಟ್ ಭವಾನಿ ದ್ವೀಪದಿಂದ ಸಂಗಮಕ್ಕೆ ತೆರಳುವ ಸಂದರ್ಭದಲ್ಲಿ ಪಲ್ಟಿಯಾಗಿದೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಎನ್.ಡಿ.ಆರ್.ಎಫ್. ಸಿಬ್ಬಂದಿ ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಅಪಾಯಕ್ಕೆ ಸಿಲುಕಿದ್ದ ಕೆಲವರನ್ನು ರಕ್ಷಿಸಲಾಗಿದ್ದು, ಮತ್ತೆ ಕೆಲವರು ಕಾಣೆಯಾಗಿದ್ದಾರೆ. ಲೈಫ್ ಜಾಕೇಟ್ ಗಳನ್ನು ಪ್ರಯಾಣಿಕರಿಗೆ ನೀಡಿರಲಿಲ್ಲವಾದ್ದರಿಂದ ಹೆಚ್ಚಿನ ಮಂದಿ ನಾಪತ್ತೆಯಾಗಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ 11 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...