alex Certify
ಕನ್ನಡ ದುನಿಯಾ       Mobile App
       

Kannada Duniya

ಗಾಯಾಳು ಯೋಧ ಗುರ್ನಾಮ್ ಸಿಂಗ್ ಹುತಾತ್ಮ

gurnam-sing

ಶ್ರೀನಗರ: ಪಾಕಿಸ್ತಾನ ಗಡಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯೋಧ ಗುರ್ನಾಮ್ ಸಿಂಗ್ ಹುತಾತ್ಮರಾಗಿದ್ದಾರೆ.

26 ವರ್ಷದ ಗುರ್ನಾಮ್ ಸಿಂಗ್ ಗಡಿ ಭದ್ರತಾ ಪಡೆಯಲ್ಲಿ ಯೋಧರಾಗಿದ್ದು, ಅಕ್ಟೋಬರ್ 21 ರಂದು ನಡೆದ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದರು. ಪಾಕಿಸ್ತಾನ ಸೇನೆಯಿಂದ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತವಾಗಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರವನ್ನೇ ನೀಡಿ, 7 ಮಂದಿ ರೇಂಜರ್ ಗಳನ್ನು ಸದೆ ಬಡಿದಿದ್ದರು. ಈ ಕಾರ್ಯಾಚರಣೆ ಸಂದರ್ಭದಲ್ಲಿ ಗುರ್ನಾಮ್ ಸಿಂಗ್ ಅವರ ತಲೆಗೆ ಗುಂಡು ತಗುಲಿತ್ತು.

ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಅವರ ದೇಹಸ್ಥಿತಿ ಗಂಭೀರವಾಗಿದ್ದರಿಂದ ವಿದೇಶದಲ್ಲಿ ಚಿಕಿತ್ಸೆ ಕೊಡಿಸಬೇಕೆಂದು ಅವರ ಕುಟುಂಬದವರು ಒತ್ತಾಯಿಸಿದ್ದರು. ಗುರ್ನಾಮ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...