alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯೋತ್ಸವದಲ್ಲಿ ಹಾರಿಸಿದ ಗುಂಡಿಗೆ ಬಾಲಕ ಬಲಿ

up.jpg.image.784.410

ಮುಜಫರ್ ನಗರ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯ ಸಾಧಿಸಿದ್ದ ಹಿನ್ನಲೆಯಲ್ಲಿ ವಿಜಯೋತ್ಸವ ಆಚರಿಸುತ್ತಿದ್ದ ಪಕ್ಷದ ಕಾರ್ಯಕರ್ತರು ಗುಂಡು ಹಾರಿಸಿದ ವೇಳೆ ಎಂಟು ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಉತ್ತರ ಪ್ರದೇಶದ ಶಾಮಿಲಿ ಜಿಲ್ಲೆಯ ಖೈರಾನ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ನಫೀಸಾ ಎಂಬವರು ಗೆಲುವು ಸಾಧಿಸಿದ್ದರು. ಸಂಭ್ರಮಾಚರಣೆಗೆ ಮುಂದಾದ ಕಾರ್ಯಕರ್ತರು ಸಾರ್ವಜನಿಕವಾಗಿಯೇ ಗಾಳಿಯಲ್ಲಿ ಗುಂಡು ಹಾರಿಸುತ್ತಾ ಬಂದಿದ್ದು, ಈ ವೇಳೆ ಒಂದು ಗುಂಡು ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬಾಲಕನಿಗೆ ತಗುಲಿದೆ.

ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿದ್ದಾನೆ. ಇದರಿಂದಾಗಿ ಸ್ಥಳದಲ್ಲಿ ಉದ್ರಿಕ್ತ ವಾತಾವರಣೆ ಏರ್ಪಟ್ಟಿದ್ದು, ಪ್ರತಿಭಟನೆ ನಡೆಸಿದ ಸ್ಥಳೀಯರು ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದ್ದಾರೆ. ಪ್ರಕರಣ ಸಂಬಂಧ ವಿಜೇತ ಅಭ್ಯರ್ಥಿ ಪತಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿರುವ ಪೊಲೀಸರು, ತಲೆಮರೆಸಿಕೊಂಡಿರುವವರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...