alex Certify
ಕನ್ನಡ ದುನಿಯಾ       Mobile App
       

Kannada Duniya

ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿದ ಬಾಬಾ ರಾಮ್ ದೇವ್

baba-ramdev-33466ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಮತ್ತೊಮ್ಮೆ ಕರೆ ನೀಡಿರುವ ಯೋಗ ಗುರು ಬಾಬಾ ರಾಮ್ ದೇವ್, ತಮ್ಮ ಹೇಳಿಕೆಗೆ ಸಮರ್ಥನೆಯನ್ನೂ ನೀಡಿದ್ದಾರೆ.

ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಮಾತನಾಡಿದ ಅವರು, ಚೀನಾ, ಭಾರತದಲ್ಲಿ ತನ್ನ ಉತ್ಪನ್ನಗಳ ಮಾರಾಟ ಮಾಡುವ ಮೂಲಕ ಭಾರೀ ಲಾಭ ಗಳಿಸುತ್ತಿದೆ. ಈ ಹಣದಲ್ಲಿ ಪಾಕಿಸ್ತಾನಕ್ಕೆ ನೆರವನ್ನು ನೀಡುತ್ತಿದೆ. ಹೀಗಾಗಿ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವ ಮೂಲಕ ಅದರ ಆರ್ಥಕತೆಗೆ ಪೆಟ್ಟು ನೀಡಬೇಕಿದೆ ಎಂದಿದ್ದಾರೆ.

ಪಾಕಿಸ್ತಾನಿ ಕಲಾವಿದರ ಮೇಲೆ ನಿಷೇಧ ಹೇರಿರುವ ಕುರಿತು ಪ್ರತಿಕ್ರಿಯಿಸಿರುವ ಬಾಬಾ ರಾಮ್ ದೇವ್, ಕಲಾವಿದರು ಭಯೋತ್ಪಾದಕರಲ್ಲ ನಿಜ. ಆದರೆ ಅವರು ಹಣ ಗಳಿಕೆ ಉದ್ದೇಶದಿಂದ ಬಾಲಿವುಡ್ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅವರುಗಳಿಗೆ ನಿಜಕ್ಕೂ ಕಳಕಳಿಯಿದ್ದರೆ ಜಮ್ಮು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ವೀರ ಯೋಧರ ಹತ್ಯೆಯನ್ನೇಕೆ ಖಂಡಿಸಲಿಲ್ಲವೆಂದು ಪ್ರಶ್ನಿಸಿದ್ದಾರೆ.

ಕೇಂದ್ರದ ಎನ್.ಡಿ.ಎ. ಸರ್ಕಾರದ ಆಡಳಿತ ವೈಖರಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಬಾಬಾ ರಾಮ್ ದೇವ್, ಯೋಗಿಯಾಗಿರುವ ತಮಗೆ ಈ ಸರ್ಕಾರದ ಕುರಿತು ತೃಪ್ತಿಯೂ ಇಲ್ಲ ಹಾಗೆಯೇ ಅತೃಪ್ತಿಯೂ ಇಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವರೆಂಬ ವಿಶ್ವಾಸವಿದೆ ಎಂದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಜೊತೆ ತಮಗೆ ವೈಯಕ್ತಿಕ ದ್ವೇಷವಿಲ್ಲವೆಂಬುದನ್ನು ಬಾಬಾ ರಾಮ್ ದೇವ್ ಸ್ಪಷ್ಟಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...