alex Certify
ಕನ್ನಡ ದುನಿಯಾ       Mobile App
       

Kannada Duniya

ಚಲಿಸುತ್ತಿದ್ದ ಬಸ್ ಗೆ ಬೆಂಕಿ

surt-busss

ಸೂರತ್: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿದ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲಾ ಅಪಾಯದಿಂದ ಪಾರಾಗಿದ್ದಾರೆ.

ರಾಜ್ ಕೋಟ್ ನಿಂದ ಹೊರಟಿದ್ದ ಬಿ.ಆರ್.ಟಿ.ಸಿ. ಬಸ್ ಸೂರತ್ ನ ಅದಾಜನ್ ಪ್ರದೇಶಕ್ಕೆ ಬಂದಿದ್ದು, ಬಸ್ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಚಾಲಕ ಕೂಡಲೇ ಬಸ್ ನಲ್ಲಿದ್ದ 12 ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾನೆ. ಕ್ಷಣಾರ್ಧದಲ್ಲಿ ಇಡೀ ಬಸ್ ಗೆ ಬೆಂಕಿ ವ್ಯಾಪಿಸಿದ್ದು, ನೋಡ ನೋಡುತ್ತಿದ್ದಂತೆಯೇ ಬಸ್ ಸುಟ್ಟುಹೋಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಲ್ಲಿದ್ದವರು ಈ ದೃಶ್ಯವನ್ನು ಸೆರೆ ಹಿಡಿದಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...