alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಗೆ ಕೈ ಕೊಟ್ಟ ಮಾಯಾವತಿ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಸುದ್ದಿಯನ್ನು ಬಿಎಸ್ಪಿ ತಿರಸ್ಕರಿಸಿದೆ. ಈಗಿನ ಪರಿಸ್ಥಿತಿಯಲ್ಲಿ ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲೂ ಬಿಎಸ್ಪಿ ಸ್ಪರ್ಧೆ ನಡೆಸಲಿದೆ ಎಂದು ಪಕ್ಷದ ಹಿರಿಯ ನಾಯಕರು ಮಾಹಿತಿ ನೀಡಿದ್ದಾರೆ.

ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ಜೊತೆ ಬಿಎಸ್ಪಿ ಮಾತುಕತೆ ನಡೆಸುತ್ತಿದೆ ಎಂಬ ಸುದ್ದಿಯಿದೆ. ಆದ್ರೆ ರಾಜ್ಯ ಹಾಗೂ ಕೇಂದ್ರ ಚುನಾವಣೆಯಲ್ಲಿ ಬಿಎಸ್ಪಿ ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾತುಕತೆ ನಡೆಸಿಲ್ಲವೆಂದು ಬಿಎಸ್ಪಿ ರಾಜ್ಯಾಧ್ಯಕ್ಷ ನರ್ಮದಾ ಪ್ರಸಾದ್ ಹೇಳಿದ್ದಾರೆ.

ಮೈತ್ರಿ ಬಗ್ಗೆ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ. ಹಾಗಾಗಿ ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲೂ ಬಿಎಸ್ಪಿ ಸ್ಪರ್ಧೆ ನಡೆಸಲಿದೆ ಎಂದವರು ಸ್ಪಷ್ಟಪಡಿಸಿದ್ದಾರೆ. ಇದೇ ವರ್ಷಾಂತ್ಯದಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ನವೆಂಬರ್-ಡಿಸೆಂಬರ್ ಮಧ್ಯೆ ಚುನಾವಣೆ ನಡೆಯಲಿದೆ.

2013ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 165, ಕಾಂಗ್ರೆಸ್  58 ಹಾಗೂ ಬಿಎಸ್ಪಿ 4 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...