alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಸಭಾ ಚುನಾವಣೆಯಲ್ಲಿ BSP ಶಾಸಕನಿಂದ ಅಡ್ಡ ಮತದಾನ

ಉತ್ತರ ಪ್ರದೇಶದ 10 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದೆ. ಬಿಎಸ್ಪಿ ಶಾಸಕ ಅನಿಲ್ ಸಿಂಗ್ ಅಡ್ಡ ಮತದಾನ ಮಾಡಿದ್ದು, ಬಿಜೆಪಿ ಅಭ್ಯರ್ಥಿಗೆ ತಮ್ಮ ವೋಟ್ ಹಾಕಿದ್ದಾರೆ. ಹಾಗಾಗಿ 10ರ ಪೈಕಿ 9 ಸ್ಥಾನಗಳಲ್ಲಿ ಗೆಲುವು ಸಾಧಿಸುವುದಾಗಿ ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದೆ.

ಬಿಜೆಪಿ ಮತ್ತದರ ಮಿತ್ರಪಕ್ಷಗಳು ಉತ್ತರ ಪ್ರದೇಶದಲ್ಲಿ 324 ಸ್ಥಾನಗಳನ್ನು ಪಡೆದಿರುವುದರಿಂದ ರಾಜ್ಯಸಭೆಯ 8 ಸ್ಥಾನಗಳಲ್ಲಿ ಗೆಲುವು ಖಚಿತವಾಗಿದೆ. ಆದ್ರೆ 9ನೇ ಸ್ಥಾನಕ್ಕೆ ಪೈಪೋಟಿ ಉಂಟಾಗಬಹುದು ಅಂತಾ ಅನಿಲ್ ಸಿಂಗ್ ಹೇಳಿದ್ದಾರೆ.

ತಾವು ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿರುವುದಾಗಿ ಬಹಿರಂಗವಾಗಿಯೇ ಅವರು ಹೇಳಿಕೊಂಡಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಗೆ ಬೆಂಬಲ ಸೂಚಿಸಿದ್ದಾರೆ. ಉತ್ತರ ಪ್ರದೇಶದ 10 ರಾಜ್ಯಸಭಾ ಸ್ಥಾನಗಳಿಗೆ 11 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...