alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಬಜೆಟ್ 2018 : ಮುಖ್ಯಾಂಶಗಳು

ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಇಂದು 2018 ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಐದನೇ ಬಜೆಟ್ ಇದಾಗಿದ್ದು, ಜಿ ಎಸ್ ಟಿ ಜಾರಿಗೊಂಡ ಬಳಿಕ ಪ್ರಥಮ ಬಜೆಟ್ ಮಂಡನೆಯಾಗುತ್ತಿದೆ.

ಮೊದಲಿಗೆ ಇಂಗ್ಲೀಷ್ ನಲ್ಲಿ ಭಾಷಣ ಆರಂಭಿಸಿದ ಅರುಣ್ ಜೇಟ್ಲಿ, ಬಳಿಕ ಹಿಂದಿಯಲ್ಲಿ ತಮ್ಮ ಬಜೆಟ್ ಮಂಡನೆ ಭಾಷಣ ಮುಂದುವರೆಸಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ದೇಶ, ಆರ್ಥಿಕ ಪ್ರಗತಿಯತ್ತ ದಾಪುಗಾಲಿಟ್ಟಿದೆ ಎಂದು ಜೇಟ್ಲಿ ಹೇಳಿದ್ದಾರೆ.

ನಾವು ಅಧಿಕಾರಕ್ಕೆ ಬಂದ ವೇಳೆ ಹಲ ನ್ಯೂನ್ಯತೆಗಳಿದ್ದವು. ಈಗ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕನ್ನು ಸುಧಾರಿಸಿದ್ದೇವೆ. ಮೂಲ ಸೌಕರ್ಯ ಮತ್ತು ಶಿಕ್ಷಣದ ಗುಣ ಮಟ್ಟ ಸುಧಾರಿಸಿದೆ. ಬಡತನ ನಿರ್ಮೂಲನೆ ಮಾಡುವತ್ತ ಸರ್ಕಾರ ಹೆಜ್ಜೆ ಇಟ್ಟಿದೆ ಎಂದಿದ್ದಾರೆ.

ಈ ವರ್ಷದ ಬಜೆಟ್ ನಲ್ಲಿ ಕೃಷಿ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೃಷಿ ಉಗ್ರಾಣಗಳ ಸಾಮರ್ಥ್ಯ ಹೆಚ್ಚಳ, ರೈತರಿಗೆ ತಮ್ಮ ಬೆಳೆಗೆ ಬೆಲೆ ನಿಗದಿ ಮಾಡುವ ಸ್ವಾತಂತ್ರ್ಯ ನೀಡಲಾಗುವುದಲ್ಲದೇ 2022 ರ ವೇಳೆ ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...