alex Certify
ಕನ್ನಡ ದುನಿಯಾ       Mobile App
       

Kannada Duniya

ಬಜೆಟ್ 2018 : ಹೈಲೈಟ್ಸ್

ಹಣಕಾಸು ಸಚಿವ ಅರುಣ್ ಜೇಟ್ಲಿ ತಮ್ಮ ಬಜೆಟ್ ಮಂಡನೆಯಲ್ಲಿ ಈ ಬಾರಿ ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ರೈತರು ಬೆಳೆದ ಬೆಳೆಯನ್ನು ನೇರವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

8 ಕೋಟಿ ಮಹಿಳೆಯರಿಗೆ ಉಜ್ವಲ ಯೋಜನೆಯನ್ನು ವಿಸ್ತರಿಸಲಾಗಿದ್ದು, ದೆಹಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. 8 ಕೋಟಿ ಮಹಿಳೆಯರಿಗೆ ಉಚಿತ ಗ್ಯಾಸ್ ವಿತರಣೆ ಮಾಡಲಾಗುವುದು ಎಂದು ಅರುಣ್ ಜೇಟ್ಲಿ ತಿಳಿಸಿದ್ದಾರೆ.

ರೈತರ ಸಾಲಗಳಿಗೆ 11 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದ್ದು, ಗ್ರಾಮಾಂತರ ಇ ಬಜಾರ್ ನಿರ್ಮಿಸಲು ಯೋಚಿಸಲಾಗಿದೆ. ಸಾವಯವ ಕೃಷಿಗೆ ಹೆಚ್ಚಿನ ಒತ್ತು  ನೀಡಲು ಉದ್ದೇಶಿಸಲಾಗಿದ್ದು, ಅಪರೇಷನ್ ಗ್ರೀನ್ ಗೆ 500 ಕೋಟಿ ರೂ. ಗಳನ್ನು ಮೀಸಲಿರಿಸಲಾಗಿದೆ.

ಕೃಷಿಕರು, ಹೈನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್, ಗ್ರಾಮೀಣ ಪ್ರದೇಶಗಳಲ್ಲಿ ಬ್ಲಾಕ್ ಬೋರ್ಡ್ ಬದಲು ಡಿಜಿಟಲ್ ಬೋರ್ಡ್ ಒದಗಿಸಲಾಗುವುದಲ್ಲದೇ ಪ್ರಧಾನ ಮಂತ್ರಿ ಅವಾಸ್ ಯೋಜನೆ ಮೂಲಕ 2018-19 ನೇ ಸಾಲಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಮನೆಗಳ ನಿರ್ಮಾಣ ಮಾಡಲಾಗುವುದು.

ಶಿಕ್ಷಣದ ಗುಣಮಟ್ಟದಲ್ಲಿ ಸುಧಾರಣೆ ತರಲಾಗುವುದಲ್ಲದೇ ಬಿ ಟೆಕ್ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ಸ್ಕಾಲರ್ ಶಿಪ್, ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ಏಕಲವ್ಯ ವಸತಿ ಶಾಲೆ ಆರಂಭ. 20 ಲಕ್ಷ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯೋಜನೆ ರೂಪಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...