alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಕೀಯ ಪಕ್ಷಗಳಿಗೆ ಜೇಟ್ಲಿ ಶಾಕ್…!

new2017-18ನೇ ಸಾಲಿನ ಬಜೆಟ್ ನಲ್ಲಿ ರಾಜಕೀಯ ಪಕ್ಷಗಳಿಗೆ ವಿತ್ತ ಸಚಿವ ಅರುಣ್ ಜೇಟ್ಲಿ ಕಹಿ ಸುದ್ದಿ ಕೊಟ್ಟಿದ್ದಾರೆ. ಚಂದಾ ಮತ್ತು ದೇಣಿಗೆಯ ಹರಿವಿಗೆ ಕಡಿವಾಣ ಹಾಕಿದ್ದಾರೆ, ಅದರಲ್ಲಿ ಪಾರದರ್ಶಕತೆ ತರುವ ಪ್ರಯತ್ನ ಮಾಡಿದ್ದಾರೆ. ರಾಜಕೀಯ ಪಕ್ಷಗಳು ಇನ್ನು ಮುಂದೆ ಬೇಕಾಬಿಟ್ಟಿಯಾಗಿ ಚಂದಾ ಅಥವಾ ದೇಣಿಗೆ ಪಡೆಯುವಂತಿಲ್ಲ. ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವಿಕೆಗೆ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿ ಮಾಡಿದೆ.

ಒಬ್ಬ ವ್ಯಕ್ತಿ, ರಾಜಕೀಯ ಪಕ್ಷಗಳಿಗೆ ಕೇವಲ 2000 ರೂಪಾಯಿ ಮಾತ್ರ ನಗದು ಮೂಲಕ ಪಾವತಿಸಲು ಅವಕಾಶ ನೀಡಲಾಗಿದೆ. ಚೆಕ್ ಅಥವಾ ಇನ್ಯಾವುದೇ ಡಿಜಿಟಲ್ ಮೋಡ್ ನಲ್ಲಿ ಚಂದಾ ಅಥವಾ ದೇಣಿಗೆ ಹಣ ಪಡೆಯಬಹುದು. ಅಷ್ಟೇ ಅಲ್ಲ, ಎಲ್ಲಾ ರಾಜಕೀಯ ಪಕ್ಷಗಳು ಕಾಲಕಾಲಕ್ಕೆ ತೆರಿಗೆ ಪಾವತಿಸಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...