alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಬಜೆಟ್ ನಾಳೆಗೆ ಮುಂದೂಡಿಕೆ..?

arun-jaitley-334ಮಂಗಳವಾರದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಭಾಷಣದ ವೇಳೆ ಸಂಸತ್ತಿನಲ್ಲೇ ಕುಸಿದು ಬಿದ್ದಿದ್ದ ಕೇರಳದ ಮಲಪ್ಪುರಂ ಲೋಕಸಭಾ ಸದಸ್ಯ, ಮಾಜಿ ಸಚಿವ ಇ. ಅಹಮ್ಮದ್ ನಿಧನರಾದ ಹಿನ್ನಲೆಯಲ್ಲಿ ಇಂದು ಮಂಡನೆಯಾಗಬೇಕಿದ್ದ ಕೇಂದ್ರ ಬಜೆಟ್ ನಾಳೆಗೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ.

ಅಹಮ್ಮದ್ ಸಂಸತ್ತಿನಲ್ಲಿ ಕುಸಿದು ಬಿದ್ದ ವೇಳೆ ಕೂಡಲೇ ಅವರಿಗೆ ಅಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ರಾಮ್ ಮನೋಹರ ಲೋಹಿಯಾ ಆಸ್ಪತ್ರೆಯ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

ಅಹಮ್ಮದ್ ಹಾಲಿ ಲೋಕಸಭಾ ಸದಸ್ಯರಾಗಿರುವ ಕಾರಣ, ಇಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಬೇಕಿದ್ದ ಬಜೆಟ್ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತು ಅಂತಿಮ ನಿರ್ಧಾರವನ್ನು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಕೈಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...