alex Certify
ಕನ್ನಡ ದುನಿಯಾ       Mobile App
       

Kannada Duniya

ನಗದು ವಹಿವಾಟಿಗೆ ಸದ್ಯಕ್ಕೆ ತೆರಿಗೆ ಇಲ್ಲ..?

200-nnt

ನವದೆಹಲಿ: ನೋಟ್ ಬ್ಯಾನ್ ಬಳಿಕ, ಕೇಂದ್ರ ಸರ್ಕಾರ ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ನಿರ್ಧಾರ ಕೈಗೊಂಡಿದೆ.

ಈಗ ಡಿಜಿಟಲ್ ಪಾವತಿ ವ್ಯವಸ್ಥೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನೇಮಿಸಲಾಗಿದ್ದ ಆಂಧ್ರ ಸಿ.ಎಂ. ಚಂದ್ರಬಾಬು ನಾಯ್ಡು ನೇತೃತ್ವದ ಉನ್ನತ ಮಟ್ಟದ ಸಮಿತಿ ಬ್ಯಾಂಕ್ ಗಳಿಂದ 50,000 ರೂ. ಗಿಂತ ಹೆಚ್ಚು ಹಣ ತೆಗೆಯಲು ತೆರಿಗೆ ವಿಧಿಸುವಂತೆ ಶಿಫಾರಸು ಮಾಡಿದೆ.

ಈ ಶಿಫಾರಸುಗಳ ಬಗ್ಗೆ ಪರಿಶೀಲನೆ ಬಳಿಕ ಕ್ರಮ ಕೈಗೊಳ್ಳುವುದಾಗಿ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ. ನಗದು ವಹಿವಾಟಿಗೆ ತೆರಿಗೆ ಹಾಕುವ ಬಗ್ಗೆ ಹಠಾತ್ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಹೇಳಿದೆ.

ತೆರಿಗೆ ವಿನಾಯಿತಿ ಏರಿಕೆ :

ಫೆಬ್ರವರಿ 1 ರಂದು ಮಂಡಿಸಲಿರುವ ಬಜೆಟ್ ನಲ್ಲಿ ಆದಾಯ ತೆರಿಗೆ ಮಿತಿಯನ್ನು ಏರಿಕೆ ಮಾಡಲು ನಿರ್ಧರಿಸಿದೆ. ಪ್ರಸ್ತುತ 2.5 ಲಕ್ಷ ರೂ. ವರೆಗೆ ಆದಾಯ ತೆರಿಗೆ ವಿನಾಯಿತಿ ಇದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಫೆಬ್ರವರಿ 1 ರಂದು ಬಜೆಟ್ ಮಂಡಿಸಲಿದ್ದು, ಆದಾಯ ತೆರಿಗೆ ವಿನಾಯಿತಿಯನ್ನು 4 ಲಕ್ಷ ರೂ.ಗೆ ಏರಿಸಲಾಗುವುದು ಎಂದು ತಿಳಿದು ಬಂದಿದೆ.

ಬಜೆಟ್ ನಲ್ಲಿ 4 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ನೀಡಲಿದ್ದು, 4-10 ಲಕ್ಷ ರೂ. ವರೆಗೆ ಶೇ. 10 ರಷ್ಟು ತೆರಿಗೆ ವಿಧಿಸಲಾಗುವುದು.

10-15 ಲಕ್ಷ ರೂ.ವರೆಗೆ ಶೇ. 15 ರಷ್ಟು ತೆರಿಗೆ, 15-20 ಲಕ್ಷ ರೂ. ವರೆಗೆ ಶೇ. 20 ರಷ್ಟು ತೆರಿಗೆ ಹಾಗೂ 20 ಲಕ್ಷ ರೂ.ಗಿಂತ ಮೇಲ್ಪಟ್ಟು ಶೇ. 30 ರಷ್ಟು ತೆರಿಗೆ ವಿಧಿಸಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...