alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲುವೆಗೆ ಬಸ್ ಬಿದ್ದು 8 ಮಂದಿ ಸಾವು

Bus-fall

ಹೈದರಾಬಾದ್: ಕಾಲುವೆಗೆ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ, 8 ಮಂದಿ ಮೃತಪಟ್ಟ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.

ಖಮ್ಮಂ ಜಿಲ್ಲೆಯ ನಾಯಕನಗುಂಡಂ ಸಮೀಪ, ಹೈದರಾಬಾದ್ ನಿಂದ ಕಾಕಿನಾಡಕ್ಕೆ ಹೊರಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. 8 ಮಂದಿ ಸಾವನ್ನಪ್ಪಿದ್ದು, 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದೆಂದು ಹೇಳಲಾಗಿದೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಬಸ್ ನಿಯಂತ್ರಣ ತಪ್ಪಿದೆ. ಮೊದಲು ಲಾರಿಗೆ ಡಿಕ್ಕಿ ಹೊಡೆದು ನಂತರ ಕಾಲುವೆಗೆ ಬಿದ್ದಿದೆ.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಮಾರ್ಗದಲ್ಲಿ ಸುಮಾರು 20 ಅಡಿ ಆಳದ ಕಾಲುವೆ ಇದ್ದು, ಅದಕ್ಕೆ ತಡೆಗೋಡೆ ಇರಲಿಲ್ಲ. ಇದೇ ಮಾರ್ಗದಲ್ಲಿ ಬಸ್ ಸಂಚರಿಸುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...