alex Certify
ಕನ್ನಡ ದುನಿಯಾ       Mobile App
       

Kannada Duniya

ಜಿಲ್ಲಾಧಿಕಾರಿ ಆತ್ಮಹತ್ಯೆ

dc-fgh

ನವದೆಹಲಿ: ಬಿಹಾರದ ಬಕ್ಸಾರ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ಮುಖೇಶ್ ಪಾಂಡೆ ಉತ್ತರ ಪ್ರದೇಶದ ಗಾಜಿಯಾಬಾದ್ ಸಮೀಪದ ಕೊಟಗಾಂವ್ ಬಳಿ ರೈಲ್ವೇ ಟ್ರ್ಯಾಕ್ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೀವನದಲ್ಲಿ ಜಿಗುಪ್ಸೆಯಿಂದ ಮನನೊಂದು ಮುಖೇಶ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ. ಆದರೆ, ಅವರ ಸಾವಿನ ಕುರಿತಾಗಿ ಅನುಮಾನ ವ್ಯಕ್ತವಾಗಿದೆ.

2012 ರ ಬ್ಯಾಚ್ ಐ.ಎ.ಎಸ್. ಅಧಿಕಾರಿಯಾಗಿದ್ದ ಮುಖೇಶ್ ಕಳೆದ ಜುಲೈ 31 ರಂದು ಬಡ್ತಿ ಪಡೆದು ಬಕ್ಸಾರ್ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಆತ್ಮಹತ್ಯೆಗೂ ಮೊದಲು ಮುಖೇಶ್, ದೆಹಲಿಯ ಜನಕಪುರಿ ಪ್ರದೇಶದಲ್ಲಿರುವ ಹೋಟೆಲ್ ಒಂದರಲ್ಲಿ ತಂಗಿದ್ದು, 10 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಂಬಂಧಿಯೊಬ್ಬರಿಗೆ ಮೆಸೇಜ್ ಕಳಿಸಿದ್ದಾರೆ.

ಸಂಬಂಧಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಪೊಲೀಸರು ಹೋಟೆಲ್ ಗೆ ತೆರಳಿ ಹುಡುಕಾಡಿದಾಗ, ಅಲ್ಲಿ ಮುಖೇಶ್ ಕಂಡು ಬಂದಿರಲಿಲ್ಲ.

ಅವರು ಗಾಜಿಯಾಬಾದ್ ನಲ್ಲಿ ಶವವಾಗಿ ಕಂಡು ಬಂದಿದ್ದಾರೆ. ಡೆತ್ ನೋಟ್ ನಲ್ಲಿ ಮಾನವೀಯತೆ ಉಳಿದಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮುಖೇಶ್ ಅವರ ಸಾವಿನ ಕುರಿತಾಗಿ ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...