alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಗೆಲುವಿಗೆ ಬ್ರೇಕ್! ಮೋದಿ, ಶಾ, ಯೋಗಿ ಇದ್ರೂ ಸಿಗಲಿಲ್ಲ ಗೆಲುವು

ಕಳೆದ ಲೋಕಸಭೆ ಚುನಾವಣೆ ಬಳಿಕ ನಡೆದಿರುವ ಬಹುತೇಕ ಚುನಾವಣೆಗಳಲ್ಲಿ ಗೆಲುವಿನ ನಾಗಾಲೋಟದಲ್ಲಿದ್ದ ಬಿ.ಜೆ.ಪಿ. ಗೆ ಉಪ ಚುನಾವಣೆಯಲ್ಲಿ ಭಾರೀ ಹಿನ್ನಡೆಯಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಪ್ರತಿನಿಧಿಸಿದ್ದ ಲೋಕಸಭೆ ಕ್ಷೇತ್ರಗಳಲ್ಲಿ ಬಿ.ಜೆ.ಪಿ. ಗೆ ಹಿನ್ನಡೆಯಾಗಿದೆ. ನರೇಂದ್ರ ಮೋದಿ ಪ್ರಧಾನಿಯಾಗಿ, ಅಮಿತ್ ಶಾ ಬಿ.ಜೆ.ಪಿ. ಅಧ್ಯಕ್ಷರಾದ ಬಳಿಕ ದೇಶದ ಅನೇಕ ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ಬಿ.ಜೆ.ಪಿ. ಗೆಲುವಿನ ಓಟ ಮುಂದುವರೆದಿದೆ.

ಅನೇಕ ರಾಜ್ಯಗಳಲ್ಲಿ ಸ್ವತಂತ್ರವಾಗಿ ಮತ್ತೆ ಕೆಲವು ರಾಜ್ಯಗಳಲ್ಲಿ ಮೈತ್ರಿಕೂಟದೊಂದಿಗೆ ಬಿ.ಜೆ.ಪಿ. ಅಧಿಕಾರಕ್ಕೆ ಬಂದಿದೆ. ಇದೇ ವೇಳೆ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ 3 ಲೋಕಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿ.ಜೆ.ಪಿ. ಗೆಲ್ಲಲಿದೆ ಎಂಬುದೇ ಹೆಚ್ಚಿನವರ ನಿರೀಕ್ಷೆಯಾಗಿತ್ತು. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಬಿ.ಜೆ.ಪಿ. ಆಡಳಿತ ಪಕ್ಷವಾಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಹಾಗಾಗಿ, ಲೋಕಸಭೆ ಉಪ ಚುನಾವಣೆಯಲ್ಲಿ ಬಿ.ಜೆ.ಪಿ. ಗೆಲ್ಲಲಿದೆ ಎಂಬುದು ಆ ಪಕ್ಷದ ನಾಯಕರ ವಿಶ್ವಾಸವಾಗಿತ್ತು.

ಆದರೆ, ಉತ್ತರ ಪ್ರದೇಶದ ಫೂಲ್ಪುರ್ ಮತ್ತು ಗೋರಖ್ ಪುರದಲ್ಲಿ, ಬಿಹಾರದ ಅರಾರಿಯಾ ಕ್ಷೇತ್ರದಲ್ಲಿ ಬಿ.ಜೆ.ಪಿ. ಹಿನ್ನಡೆ ಅನುಭವಿಸಿದೆ. ಕೇಸರಿ ಪಡೆಯ ಭದ್ರ ಕೋಟೆಯಾಗಿರುವ ಗೋರಖ್ ಪುರ ಕ್ಷೇತ್ರವನ್ನು ಸಿ.ಎಂ. ಯೋಗಿ ಆದಿತ್ಯನಾಥ್ ಪ್ರತಿನಿಧಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ತಮ್ಮ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ಈ ಉಪ ಚುನಾವಣೆ ಫಲಿತಾಂಶ ಗೆಲುವಿನ ಓಟದಲ್ಲಿದ್ದ ಬಿ.ಜೆ.ಪಿ. ಗೆ ಬಿಗ್ ಶಾಕ್ ನೀಡಿದಂತಾಗಿದೆ. ಎಸ್.ಪಿ., ಬಿ.ಎಸ್.ಪಿ. ಮೈತ್ರಿಕೂಟಕ್ಕೆ ಗೆಲುವಾಗಿದೆ. ಇದರೊಂದಿಗೆ ಮೈತ್ರಿಯ ಹೊಸ ರಾಜಕೀಯ ಲೆಕ್ಕಾಚಾರ ಶುರುವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...