alex Certify
ಕನ್ನಡ ದುನಿಯಾ       Mobile App
       

Kannada Duniya

10 ಕೋಟಿ ಕುಟುಂಬಗಳಿಗೆ ಸಿಗಲಿದೆ ಆಯುಷ್ಮಾನ್ ಭಾರತ್ ಯೋಜನೆ ಲಾಭ

ರಾಷ್ಟ್ರೀಯ ಆರೋಗ್ಯ ಸಂರಕ್ಷಣಾ ಯೋಜನೆ ಆಯುಷ್ಮಾನ್ ಭಾರತ್ ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದಕ್ಕಾಗಿ ಕೌನ್ಸಿಲ್ ರೂಪಿಸಲು ನಿರ್ಧಾರ ಕೈಗೊಂಡಿದೆ. ಆರೋಗ್ಯ ಸಚಿವರು ಕೌನ್ಸಿಲ್ ನ ಅಧ್ಯಕ್ಷತೆ ವಹಿಸಲಿದ್ದಾರೆ. ಆಯುಷ್ಮಾನ್ ಯೋಜನೆ ಭಾರತದ 10 ಕೋಟಿ ಬಡ ಕುಟುಂಬಗಳಿಗೆ ನೆರವಾಗಲಿದೆ.

ಈ ಯೋಜನೆಯಡಿ 10 ಕೋಟಿ ಬಡ ಕುಟುಂಬಗಳಿಗೆ ವರ್ಷಕ್ಕೆ 5 ಲಕ್ಷ ರೂಪಾಯಿ ವೈದ್ಯಕೀಯ ನೆರವು ಸಿಗಲಿದೆ. ಈ ಯೋಜನೆಗಾಗಿ 85217 ಕೋಟಿ ಹಣವನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ. ಕೆಳ ವರ್ಗದವರು ಹಾಗೂ ಬಡ ಕುಟುಂಬಗಳು ಈ ಯೋಜನೆಯ ಲಾಭ ಪಡೆಯಲಿವೆ.

ಆಯುಷ್ಮಾನ್ ಭಾರತ್, ಈಗಾಗಲೇ ಜಾರಿಯಲ್ಲಿರುವ ಕೇಂದ್ರ ಸರ್ಕಾರ ಪ್ರಾಯೋಜಿತ ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆ ಮತ್ತು ಹಿರಿಯ ನಾಗರಿಕ ಆರೋಗ್ಯ ವಿಮೆ ಯೋಜನೆಯನ್ನು ಒಳಗೊಂಡಿರಲಿದೆ. ಮಹಿಳೆ, ಮಕ್ಕಳು ಸೇರಿದಂತೆ ಹಿರಿಯ ನಾಗರಿಕರು ಚಿಕಿತ್ಸೆಯಿಂದ ವಂಚಿತರಾಗದಿರಲಿ ಎನ್ನುವ ಕಾರಣಕ್ಕೆ ಈ ಯೋಜನೆಗೆ ಯಾವುದೇ ವಯಸ್ಸಿನ ಮಿತಿ ಹೇರಿಲ್ಲ. ಗಂಭೀರ ರೋಗಗಳಿಗೆ ರೋಗಿಗಳು ಇದ್ರ ಮೂಲಕ ಚಿಕಿತ್ಸೆ ಪಡೆಯಬಹುದಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...