alex Certify
ಕನ್ನಡ ದುನಿಯಾ       Mobile App
       

Kannada Duniya

ಇನ್ಮುಂದೆ ರಾತ್ರಿಯಲ್ಲೂ ಹಗಲೇ

modi-cabinet

ನವದೆಹಲಿ: ನಿಮಗೆ ಬೇಕೆನಿಸಿದಾಗ ಸಿನಿಮಾ ನೋಡಬಹುದು, ಶಾಪಿಂಗ್ ಮಾಡಬಹದು. ಟೈಮಿಲ್ಲ ಎಂದು ಹೇಳುವಂತೆಯೇ ಇಲ್ಲ. ನಿಮಗೆ ಬೇಕಾದಾಗ ಅಂಗಡಿಗೆ ಹೋಗಿ ಬರಬಹುದು. ದಿನದ 24 ಗಂಟೆಯೂ ಮಾಲ್ ಗಳು ಓಪನ್ ಇರುತ್ತವೆ.

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನೂತನ ಮಾಡೆಲ್ ಶಾಪ್ಸ್ ಅಂಡ್ ಎಸ್ಟಾಬ್ಲಿಷ್ ಮೆಂಟ್ ಬಿಲ್ ಗೆ ಅನುಮೋದನೆ ನೀಡಲಾಗಿದ್ದು, ಸಿನಿಮಾ ಮಂದಿರ, ಶಾಪಿಂಗ್ ಮಾಲ್, ಹೋಟೆಲ್ ಎಲ್ಲಾ ಅಂಗಡಿ ಮುಂಗಟ್ಟುಗಳು ದಿನವಿಡೀ ತೆರೆಯಲು ಅನುವು ಮಾಡಿಕೊಡಲಾಗಿದೆ. ಪ್ರಸ್ತುತ ಆಯಾ ರಾಜ್ಯಗಳಲ್ಲಿ ಅಲ್ಲಿನ ಪರಿಸ್ಥಿತಿಗೆ ತಕ್ಕಂತೆ ವ್ಯವಹಾರ, ರಜೆ ನೀಡುವುದು ಚಾಲ್ತಿಯಲ್ಲಿದೆ. ಏಕರೂಪತೆಯನ್ನು ತರುವ ಉದ್ದೇಶದಿಂದ ನೂತನ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಲಾಗಿದೆ.

ಹೀಗಿದ್ದರೂ ಕೂಡ ಕಾಯ್ದೆಯನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರಗಳಿಗೆ ಸ್ವಾತಂತ್ರ್ಯ ನೀಡಲಾಗಿದೆ. ಕಾಯ್ದೆಯನ್ನು ಜಾರಿಗೆ ತರುವುದು ಆಯಾ ರಾಜ್ಯಗಳಿಗೆ ಸಂಬಂಧಿಸಿದೆ. ಒಂದು ವೇಳೆ ಇದು ಜಾರಿಯಾದಲ್ಲಿ ಹಗಲಿಗಿಂತ ರಾತ್ರಿ ವ್ಯವಹಾರಗಳೇ ಹೆಚ್ಚಾಗಬಹುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...