alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರಖಂಡ ಮತಪ್ರಚಾರಕ್ಕೆ ಇಂದು ತೆರೆ

rahul1

ಉತ್ತರಖಂಡ ವಿಧಾನಸಭಾ ಚುನಾವಣಾ ಪ್ರಚಾರ ಇಂದು ಕೊನೆಗೊಳ್ಳಲಿದೆ. ಫೆಬ್ರವರಿ 15ರಂದು ಎಲ್ಲ 70 ಸೀಟುಗಳಿಗೆ ಮತದಾನ ನಡೆಯಲಿದೆ. ಮತದಾನಕ್ಕೆ ಎಲ್ಲ ಸಿದ್ಧತೆ ನಡೆಯುತ್ತಿದೆ.

ಭಾನುವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗಂಗಾ ಮಾತೆಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಇದಕ್ಕೂ ಮೊದಲು ರ್ಯಾಲಿ ನಡೆಸಿ ಮತಯಾಚನೆ ಮಾಡಿದ್ರು. ರಾಹುಲ್ ರ್ಯಾಲಿಗೆ ಬಿಜೆಪಿ ಕಾರ್ಯಕರ್ತರು ಎದುರಾದ್ರು. ರಾಹುಲ್ ಮುಂದೆ ಮೋದಿ..ಮೋದಿ ಎಂದು ಘೋಷಣೆ ಕೂಗಿದ್ರು. ಈ ಬಗ್ಗೆ ಶಾಂತವಾಗಿ ಪ್ರತಿಕ್ರಿಯೆ ನೀಡಿದ ರಾಹುಲ್, ತಾನು ಬಿಜೆಪಿ ಕಾರ್ಯಕರ್ತರನ್ನು ಸ್ವಾಗತಿಸುವುದಾಗಿ ತಿಳಿಸಿದ್ರು.

ಭಾನುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಎರಡು ಕಡೆ ರ್ಯಾಲಿ ನಡೆಸಿ ಮತಯಾಚನೆ ಮಾಡಿದ್ದಾರೆ. ಫೆಬ್ರವರಿ 15ರಂದು 70 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 75,12,559 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...