alex Certify
ಕನ್ನಡ ದುನಿಯಾ       Mobile App
       

Kannada Duniya

‘ಮರಣದಂಡನೆ ಶಿಕ್ಷೆಯ ಸ್ವರೂಪ ಬದಲಿಸಬಹುದೇ?’

ನವದೆಹಲಿ: ಮರಣದಂಡನೆಯಲ್ಲಿ ನೇಣು ಹಾಕುವ ಬದಲು, ಬೇರೆ ವಿಧಾನ ಬಳಸಬಹುದೇ? ಎಂದು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮರಣದಂಡನೆ ವೇಳೆ ನೇಣು ಹಾಕಲಾಗುತ್ತದೆ. ಇದಕ್ಕಿಂತ ಬೇರೆ ವಿಧಾನದಲ್ಲಿ ಶಿಕ್ಷೆಯನ್ನು ಜಾರಿಗೊಳಿಸಲು ಸಾಧ್ಯವಿದೆಯೇ ಎಂಬುದನ್ನು 3 ತಿಂಗಳಲ್ಲಿ ತಿಳಿಸುವಂತೆ ಸೂಚಿಸಿದೆ.

ರಿಷಿ ಮಲ್ಹೋತ್ರಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎ.ಎಂ. ಕಾನ್ವಿಲ್ಕರ್, ನ್ಯಾ. ಡಿ.ವೈ. ಚಂದ್ರಾಚೂಡ್ ಅವರನ್ನೊಳಗೊಂಡ ಪೀಠ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

ಸಂವಿಧಾನದ ಪ್ರಕಾರ, ಅಪರಾಧಿ ನೋವು ಅನುಭವಿಸದೇ ಸಾಯಬೇಕಿದೆ. ಭಾರತೀಯ ದಂಡ ಸಂಹಿತೆ ಪ್ರಕಾರ, ಮರಣ ದಂಡನೆಯ ವೇಳೆ ನೇಣು ಹಾಕಲಾಗುತ್ತದೆ. ಈ ಕಾನೂನು ಬದಲಾವಣೆ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಅರ್ಜಿದಾರರು ಕೋರಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...