alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯಾನ್ಸರ್ ಗೆ ಬಲಿಯಾಗುವವರ ಸಂಖ್ಯೆ ಎಷ್ಟಿದೆ ಗೊತ್ತಾ?

J-P-Nadd

ಆಧುನಿಕ ಜೀವನಶೈಲಿ, ತಂಬಾಕು ಸೇವನೆ ಸೇರಿದಂತೆ ಹಲವಾರು ಕಾರಣಗಳಿಂದ ಕ್ಯಾನ್ಸರ್ ಇತ್ತೀಚೆಗೆ ಹೆಚ್ಚಿನ ಜನರಲ್ಲಿ ಕಾಣಿಸಿಕೊಳ್ಳುತ್ತಿದೆ. ಇದರಿಂದಾಗಿ ದೇಶದಲ್ಲಿ ಪ್ರತಿವರ್ಷ ಕ್ಯಾನ್ಸರ್ ನಿಂದಾಗಿ ಸಾವನ್ನಪ್ಪುವವರ ಪ್ರಮಾಣ ಹೆಚ್ಚಾಗಿದೆ.

ದೇಶದಲ್ಲಿ ಕ್ಯಾನ್ಸರ್ ನಿಂದ ಪ್ರತಿವರ್ಷ 5 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವೇ ಹೇಳಿದೆ. ಲೋಕಸಭೆ ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ನಡೆದ ಚರ್ಚೆಯಲ್ಲಿ ಉತ್ತರಿಸಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು, ವಾರ್ಷಿಕವಾಗಿ ಕ್ಯಾನ್ಸರ್ ನಿಂದಾಗಿ 5 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳ ವಯಸ್ಸಿನ ಮಾಹಿತಿ ಲಭ್ಯವಾಗಿಲ್ಲ. ಪುರುಷರು ಹೆಚ್ಚಾಗಿ ಹೊಟ್ಟೆ ಮತ್ತು ಗಂಟಲು ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮಹಿಳೆಯರು ಹೆಚ್ಚಾಗಿ ಗರ್ಭಾಶಯ ಕ್ಯಾನ್ಸರ್, ಸ್ತನಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ. ಕೇಂದ್ರ ಸರ್ಕಾರದ ವತಿಯಿಂದ 20 ಕ್ಯಾನ್ಸರ್ ಅಧ್ಯಯನ ಕೇಂದ್ರ ಆರಂಭಿಸಲಾಗುವುದು. 7 ಕ್ಯಾನ್ಸರ್ ಸಂಶೋಧನೆ ಮತ್ತು ಚಿಕಿತ್ಸಾ ಕೇಂದ್ರಗಳಿಗೆ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...