alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವೀಪರ್ ಕೆಲಸಕ್ಕಾಗಿ ಒಳಚರಂಡಿಗಿಳಿದ ಇಂಜಿನಿಯರ್ಸ್

job

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟರಮಟ್ಟಿಗಿದೆ ಎನ್ನೋದಕ್ಕೆ ಇದು ಉತ್ತಮ ಉದಾಹರಣೆ. ಪುರಸಭೆ ಸ್ವೀಪರ್ ಕೆಲಸಕ್ಕೆ ಇಂಜಿನಿಯರ್, ಸ್ನಾತಕೋತ್ತರ ಹಾಗೂ ಪದವೀಧರರು ಅರ್ಜಿ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ ದೈಹಿಕ ಪರೀಕ್ಷೆಯಲ್ಲಿ ಒಳಚರಂಡಿ ಸ್ವಚ್ಛತೆಗಿಳಿದಿದ್ದಾರೆ.

ಉತ್ತರ ಪ್ರದೇಶದ ಮೊರದಾಬಾದ್ ಪುರಸಭೆ 1083 ಸ್ವೀಪರ್ ಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇದಕ್ಕೆ ಇಂಜಿನಿಯರ್, ಸ್ನಾತಕೋತ್ತರ ಹಾಗೂ ಪದವೀಧರರು ಅರ್ಜಿ ಸಲ್ಲಿಸಿದ್ದಾರೆ. ದೈಹಿಕ ಪರೀಕ್ಷೆ ವೇಳೆ ಅಭ್ಯರ್ಥಿಗಳಿಗೆ ಒಳಚರಂಡಿ ಸ್ವಚ್ಛಗೊಳಿಸುವಂತೆ ಪುರಸಭೆ ತಿಳಿಸಿದೆ.

ಯಾವುದೇ ಮುನ್ನೆಚ್ಚರಿಕಾ ಕ್ರಮವಿಲ್ಲದೆ, ಹ್ಯಾಂಡ್ ಗ್ಲೌಸ್ ನೀಡದೆ ಒಳಚರಂಡಿ ಸ್ವಚ್ಛತೆ ಮಾಡುವಂತೆ ಸೂಚನೆ ನೀಡಿದೆ. ಕೆಲ ಅಭ್ಯರ್ಥಿಗಳು ಅನಿವಾರ್ಯವಾಗಿ ಚರಂಡಿಗೆ ಇಳಿದಿದ್ದಾರೆ. ಮತ್ತೆ ಕೆಲವರು ಮೇಲೆ ನಿಂತು ಕೆಸರು ತೆಗೆಯುವ ಪ್ರಯತ್ನ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...