alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ಬಗ್ಗೆ ಟೀಕೆ : ವ್ಯಂಗ್ಯ ಚಿತ್ರಕಾರ ಅರೆಸ್ಟ್

ಚೆನ್ನೈ: ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಅಧಿಕಾರಿಗಳ ಕುರಿತಾಗಿ ವ್ಯಂಗ್ಯ ಚಿತ್ರವನ್ನು ಪ್ರಕಟಿಸಿದ್ದ ಹವ್ಯಾಸಿ ವ್ಯಂಗ್ಯ ಚಿತ್ರಕಾರ ಬಾಲಾ ಅವರನ್ನು ಬಂಧಿಸಲಾಗಿದೆ.

ತಮಿಳುನಾಡಿನ ಬಡ ಕುಟುಂಬದ ಕೂಲಿಕಾರ್ಮಿಕನಿಗೆ ಹಣಕಾಸು ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದು, ಅವರು ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ತಿರುನ್ವೇಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಹಲವು ಬಾರಿ ಮನವಿ ಮಾಡಿದ್ದರು.

ಆದರೆ, ಅಧಿಕಾರಿಗಳು ಸ್ಪಂದಿಸದ ಕಾರಣ ಕೂಲಿಕಾರ್ಮಿಕ ಇಸಾಕಿ ಮುತ್ತು, ಅವರ ಪತ್ನಿ ಸುಬ್ಬುಲಕ್ಷ್ಮಿ, ತಮ್ಮ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಹವ್ಯಾಸಿ ವ್ಯಂಗ್ಯ ಚಿತ್ರಕಾರ ಬಾಲಾ, ಮುಖ್ಯಮಂತ್ರಿ ಹಾಗೂ ಅಧಿಕಾರಿಗಳು ಅರೆಬೆತ್ತಲಾಗಿ ದುಡ್ಡಿನಿಂದ ಗುಪ್ತಾಂಗ ಮುಚ್ಚಿಕೊಂಡು ಮಗು ಸುಟ್ಟು ಹೋಗುತ್ತಿರುವ ದೃಶ್ಯವನ್ನು ನೋಡುತ್ತಿರುವಂತೆ ಚಿತ್ರಿಸಿದ್ದಾರೆ.

ಈ ವ್ಯಂಗ್ಯ ಚಿತ್ರವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದು, ವೈರಲ್ ಆಗಿತ್ತು. ಇದಾದ ಬಳಿಕ ತಮಿಳುನಾಡು ಪೊಲೀಸರು ಬಾಲಾ ಅವರನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...