alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಕ್ಕಿನ ತಪ್ಪಿಗೆ ಯುವತಿ ಮೇಲೆ ಎರಗಿದ ಕಾಮುಕ

cat

ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿವೆ. ಬಹುತೇಕ ಎಲ್ಲಾ ಕಡೆಗಳಲ್ಲಿ ಕಾಮುಕರ ಅಟ್ಟಹಾಸ ಮಿತಿಮೀರಿದ್ದು, ವಿಚಿತ್ರ ಕಾರಣಕ್ಕೆ ಹೆಣ್ಣುಮಗಳೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ರಾಯ್ ಬರೇಲಿ ಜಿಲ್ಲೆಯ ಮೋಹನ್ ಪುರ್ ತಿರಿಯಾ ಗ್ರಾಮದಲ್ಲಿ ಯುವತಿಯೊಬ್ಬಳು ಸಾಕಿದ್ದ ಬೆಕ್ಕು ಪಕ್ಕದ ಮನೆಯಲ್ಲಿ ಸಾಕಿದ್ದ ಪಾರಿವಾಳವನ್ನು ತಿಂದಿತ್ತು. ಇದರಿಂದ ಆಕ್ರೋಶಗೊಂಡಿದ್ದ ಪಾರಿವಾಳ ಸಾಕಿದ ಯುವಕ 22 ವರ್ಷದ ರಾಕೇಶ್, ಯುವತಿಯ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾನೆ. ಆಕೆ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಒಳನುಗ್ಗಿದ ರಾಕೇಶ್, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಯುವತಿ ಕೂಗಿಕೊಂಡಿದ್ದು, ಅಕ್ಕಪಕ್ಕದ ಮನೆಯವರು ಬಂದು ಯುವತಿಯನ್ನು ರಕ್ಷಿಸಿದ್ದಾರೆ.

ಪೊಲೀಸರು ರಾಕೇಶ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ತಾನು ಸಾಕಿದ್ದ ಪಾರಿವಾಳವನ್ನು ಯುವತಿಯ ಬೆಕ್ಕು ತಿಂದು ಹಾಕಿತ್ತು. ಹಾಗಾಗಿ ಸೇಡು ತೀರಿಸಿಕೊಳ್ಳಲು ಹಾಗೆ ಮಾಡಿದೆ ಎಂದು ತಿಳಿಸಿದ್ದಾನೆ. ಈ ಪ್ರಕರಣ ವ್ಯಾಪಕ ಚರ್ಚೆಗೆ ಒಳಗಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...