alex Certify
ಕನ್ನಡ ದುನಿಯಾ       Mobile App
       

Kannada Duniya

ಕಣ್ಣೆದುರಲ್ಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಬೈಕ್ ಸವಾರರು

west-d

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪ್ರವಾಹದಿಂದಾಗಿ ಅನೇಕ ಜಿಲ್ಲೆಗಳಲ್ಲಿನ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪಶ್ಚಿಮ ಮಿಡ್ನಾಪುರ್ ಜಿಲ್ಲೆಯಲ್ಲಿ ಬೈಕ್ ಸವಾರರಿಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಕಣ್ಣೆದುರಲ್ಲೇ ನಡೆದ ಘಟನೆಯಿಂದಾಗಿ ಜನ ಆಘಾತಕ್ಕಿಡಾಗಿದ್ದಾರೆ.

ರಭಸದಿಂದ ಹರಿಯುತ್ತಿದ್ದ ನೀರಿನ ನಡುವೆಯೇ ಸೇತುವೆ ದಾಟುವ ಸಾಹಸಕ್ಕೆ ಮುಂದಾದ ಬೈಕ್ ಸವಾರರು, ಸೇತುವೆ ಅಂಚಿಗೆ ತೆರಳಿದ್ದು, ಆಯತಪ್ಪಿ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದಾರೆ.

ಈ ದೃಶ್ಯಗಳೆಲ್ಲಾ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಪಶ್ಚಿಮ ಮಿಡ್ನಾಪುರ್, ಬಾಲಸೋರ್, ಸುಂದರಘಡ ಮೊದಲಾದ ಜಿಲ್ಲೆಗಳಲ್ಲಿ ಪ್ರವಾಹದಿಂದ ಸಾವಿರಾರು ಜನ ಸಂಕಷ್ಟಕ್ಕೆ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...