alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಚ್ಚಿಬೀಳಿಸುತ್ತೆ ಸಿಸಿ ಟಿವಿಯಲ್ಲಿ ಸೆರೆಯಾಗಿರೋ ದೃಶ್ಯ

ತೆಲಂಗಾಣದ ಸಿಕಂದರಾಬಾದ್‌ ನಲ್ಲಿ ಸರಕಾರಿ ಬಸ್ ನಿಯಂತ್ರಣ ಕಳೆದುಕೊಂಡು ಪಾದಚಾರಿಯೊಬ್ಬನ ಮೇಲೆ‌ ಹರಿದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ದುರ್ಘಟನೆ ತೆಲಂಗಾಣದ ಸಿಕಂದರಾಬಾದ್‌ ನ ಮಾರುಕಟ್ಟೆಯಲ್ಲಿ ನಡೆದಿದ್ದು, ತೆಲಂಗಾಣ ಸರಕಾರಿ ಬಸ್ ಬ್ರೇಕ್ ಫೇಲ್ ಆಗಿದ್ದರಿಂದ ಆಟೋ, ಕಾರಿಗೆ ಗುದ್ದಿದೆ. ಬಳಿಕ ಪಾದಚಾರಿಯ ಮೇಲೂ‌ ಹರಿದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು,‌ ಮೂರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಮಧ್ಯೆ ಬಸ್ ಚಾಲಕನನ್ನು ಅಹ್ಮದ್ ಎಂದು ಗುರುತಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಬಸ್ ಬ್ರೇಕ್ ಫೇಲ್ ಆಗಿದ್ದರಿಂದ ಈ‌ ಘಟನೆ ನಡೆದಿದೆ ಎಂದು‌ ಚಾಲಕ ಹೇಳಿಕೆ ನೀಡಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...