alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯಾಮರಾದಲ್ಲಿ ಸೆರೆಯಾಯ್ತು ಮುಂಬೈ ಪೊಲೀಸರ ಕೃತ್ಯ

mumbai police in stationಮುಂಬೈ ಪೊಲೀಸರ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾನವೀಯತೆಯನ್ನೇ ಮರೆತು ವ್ಯಕ್ತಿಯೊಬ್ಬನನ್ನು ಠಾಣೆಯಲ್ಲೇ ಹಿಗ್ಗಾಮುಗ್ಗಾ ಥಳಿಸುತ್ತಿರುವ ಈ ವಿಡಿಯೋ ವೀಕ್ಷಿಸಿದವರು ಪೊಲೀಸರ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸುತ್ತಿದ್ದಾರೆ.

ಕಾಂಡೀವಲಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ವ್ಯಕ್ತಿಯೊಬ್ಬನನ್ನು ಪೊಲೀಸರು ಎಳೆದುಕೊಂಡು ಬಂದಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬಳೂ ಕಂಡು ಬರುತ್ತಿದ್ದು, ಕೆಲ ಹೊತ್ತಿನಲ್ಲೇ ಆಕೆ ಕಣ್ಮರೆಯಾಗಿದ್ದಾಳೆ.

ಬಳಿಕ ಆ ವ್ಯಕ್ತಿಯನ್ನು ಮೂರ್ನಾಲ್ಕು ಮಂದಿ ಪೊಲೀಸರು ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸುತ್ತಿದ್ದಾರೆ. ಆತ ಅಂಗಲಾಚಿ ಬೇಡಿಕೊಂಡರೂ ಮನ ಕರಗದ ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದವರೊಬ್ಬರು ತಮ್ಮ ಮೊಬೈಲ್ ನಲ್ಲಿ ಇದನ್ನು ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಇದೀಗ ಘಟನೆ ಕುರಿತು ತನಿಖೆ ನಡೆಸಲು ಆದೇಶಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...