alex Certify
ಕನ್ನಡ ದುನಿಯಾ       Mobile App
       

Kannada Duniya

ಜಾಲತಾಣಗಳಲ್ಲಿ ಹರಿದಾಡುತ್ತಿದೆ ವಿಐಪಿ ಯ ವಿಡಿಯೋ

noida-video‘ವಿಐಪಿ’ ಹಣೆಪಟ್ಟಿ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಕಾರಿಗೆ ಸೈಡ್ ಕೊಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಟ್ರಾಫಿಕ್ ಸಿಗ್ನಲ್ ನಲ್ಲಿಯೇ ಸ್ಕೂಟರ್ ಸವಾರನೊಂದಿಗೆ ವಾಗ್ವಾದಕ್ಕಿಳಿದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನೆ ಆಗಸ್ಟ್ 24ರ ಬೆಳಿಗ್ಗೆ 8 ಗಂಟೆ ಸುಮಾರಿಗೆ ನೋಯ್ಡಾದ ಸೆಕ್ಟರ್ 57 ರ ಟ್ರಾಫಿಕ್ ಸಿಗ್ನಲ್ ನಲ್ಲಿ ನಡೆದಿದ್ದು, ತನ್ನ ಕಾರಿನ ಮೇಲೆ ವಿಐಪಿ ಸ್ಟಿಕ್ಕರ್ ಹೊಂದಿದ್ದ ವ್ಯಕ್ತಿಯೊಬ್ಬ, ರೆಡ್ ಸಿಗ್ನಲ್ ಇದ್ದ ವೇಳೆ ಕಾರಿಗೆ ಜಾಗ ಬಿಡಲಿಲ್ಲವೆಂಬ ಕಾರಣಕ್ಕೆ ಸ್ಕೂಟರ್ ಸವಾರನೊಂದಿಗೆ ವಾಗ್ವಾದಕ್ಕೆ ಮುಂದಾಗಿದ್ದಾನೆ.

ಇದೇ ಟ್ರಾಫಿಕ್ ಸಿಗ್ನಲ್ ನಲ್ಲಿ ಕ್ಯಾಬ್ ನಲ್ಲಿ ಕುಳಿತಿದ್ದ ಪ್ರಶಾಂತ್ ಸಕ್ಸೇನಾ ಎಂಬವರು ಈ ದೃಶ್ಯಾವಳಿಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿಯಲಾರಂಭಿಸಿದ್ದಾರೆ. ಇದನ್ನು ಗಮನಿಸಿದ ವಿಐಪಿ ಯ ಪುತ್ರಿ ತನ್ನ ತಂದೆಗೆ ವಿಷಯವನ್ನು ಮುಟ್ಟಿಸಿದ್ದು, ಸಕ್ಸೇನಾ ಅವರ ಮೊಬೈಲ್ ಕಿತ್ತುಕೊಳ್ಳಲು ಪ್ರಯತ್ನಿಸಲಾಗಿದೆ. ಆದರೂ ಅವರ ಯತ್ನವನ್ನು ನಿಷ್ಪಲಗೊಳಿಸಿದ ಸಕ್ಸೇನಾ, ಈಗ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದು, ವಿಐಪಿ ಸಂಸ್ಕೃತಿಗೆ ಕೊನೆ ಹಾಡಲು ಯತ್ನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...